ಮುಂಬೈ : ಅನಧಿಕೃತ ಜಾಹೀರಾತು ಫಲಕವೊಂದು ಪೆಟ್ರೋಲ್ ಪಂಪ್ ಮೇಲೆ ಬಿದ್ದ ಪರಿಣಾಮ 14 ಮಂದಿ ಸಾವನ್ನಪ್ಪಿದ ಘಟನೆ ಮುಂಬೈನ ಘಾಟ್‍ಕೋಪರ್‍ನಲ್ಲಿ ಸೋಮವಾರ ನಡೆದಿದೆ. ಈ ಅವಘಡದಲ್ಲಿ 74 ಮಂದಿ ಗಾಯಗೊಂಡಿದ್ದಾರೆ.
ಪೆಟ್ರೋಲ್ ಪಂಪ್ ಎದುರು ಬೃಹತ್ ಜಾಹೀರಾತು ಫಲಕವನ್ನು ನಿಲ್ಲಿಸಲಾಗಿತ್ತು. ಬಿರುಗಾಳಿ ಸಹಿತ ಮಳೆಯಿಂದಾಗಿ ಈ ಬೃಹತ್ ಜಾಹೀರಾತು ಫಲಕ ಕುಸಿದು ಬಿದ್ದಿದೆ. ಕಬ್ಬಿಣದ ಬಿಲ್ ಬೋರ್ಡ್ ಪೆಟ್ರೋಲ್ ಪಂಪ್ ಸಮೀಪ ನಿಂತಿದ್ದ ಕಾರುಗಳ ಮೇಲೆ ಬಿದ್ದಿದೆ. ಪರಿಣಾಮ ಸಾವು ನೋವಿನ ಸಂಖ್ಯೆ ಹೆಚ್ಚಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳುಗಳಲ್ಲಿ 35 ಮಂದಿ ಬಿಡುಗಡೆಗೊಂಡಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಪರಿಹಾರ ಕಾರ್ಯಾಚರಣೆ ಇಂದು ಬೆಳಿಗ್ಗೆಯೂ ಮುಂದುವರೆದಿತ್ತು ಎಂದು ತಿಳಿದುಬಂದಿದೆ.
ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಘಟನೆ ಕುರಿತು ಪ್ರತಿಕ್ರಿಯೆ ನೀಡಿದ್ದು, ಸಾವನ್ನಪ್ಪಿದವರ ಕುಟುಂಬದ ಸದಸ್ಯಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಜೊತೆಗೆ ಮುಂಬೈನಲ್ಲಿರುವ ಎಲ್ಲಾ ಹೋಡಿರ್ಂಗ್‍ಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…