Featured

ಮುಂಬೈ ಹೋರ್ಡಿಂಗ್ ದುರಂತ : ಜಾಹೀರಾತು ಕಂಪನಿಯ ಮಾಲೀಕ ಅರೆಸ್ಟ್ – Vishwanews24

ಮುಂಬೈ ಹೋರ್ಡಿಂಗ್ ದುರಂತ : ಜಾಹೀರಾತು ಕಂಪನಿಯ ಮಾಲೀಕ ಅರೆಸ್ಟ್

ಮುಂಬೈ: ಘಾಟ್‍ಕೋಪರ್‌ನಲ್ಲಿ  ಬಿಲ್ ಬೋರ್ಡ್  ಕುಸಿದು ಬಿದ್ದು 16 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಹೀರಾತು ಫಲಕ ಅಳವಡಿಸುವ ಹೊಣೆ ಹೊತ್ತಿದ್ದ ಉದ್ಯಮಿ ಭವೇಶ್ ಭಿಂಡೆ  ಎಂಬವರನ್ನು ರಾಜಸ್ಥಾನದ ಉದಯಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಇಗೋ ಮೀಡಿಯಾ ಪ್ರೈವೇಟ್ ಲಿಮಿಟೆಡ್‍ನ ಮಾಲೀಕ ಭಿಂಡೆ ಅವರನ್ನು ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್  ಬಂಧಿಸಿದೆ. ಆರೋಪಿಯ ಬಂಧನಕ್ಕೆ ಮುಂಬೈ ಪೊಲೀಸರಿಂದ ಒಟ್ಟು ಎಂಟು ತಂಡಗಳನ್ನು ವಿವಿಧ ಸ್ಥಳಗಳಿಗೆ ಕಳುಹಿಸಲಾಗಿತ್ತು. ಆರೋಪಿ ಪದೇ ಪದೇ ಸ್ಥಳ ಬದಲಿಸುತ್ತಿದ್ದ. ಅಲ್ಲದೇ ಹೆಸರು ಬದಲಿಸಿಕೊಂಡು ಉದಯಪುರದ ಹೋಟೆಲ್ ಒಂದರಲ್ಲಿ ತಂಗಿದ್ದ. ಇದೀಗ ಆರೋಪಿಯ ಬಂಧನವಾಗಿದ್ದು, ಇಂದು (ಶುಕ್ರವಾರ) ಬೆಳಗ್ಗೆ ಮುಂಬೈಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಾಹೀರಾತು ಫಲಕ ಅಳವಡಿಕೆ ಕಂಪನಿ, ಫಲಕ ಅಳವಡಿಸುವಲ್ಲಿ ನಿಯಮ ಉಲ್ಲಂಘನೆಯಾಗಿರುವುದು ಸ್ಪಷ್ಟವಾಗಿದೆ. ಕಂಪನಿಗೆ 40*40 ಅಡಿಗಳ ಫಲಕ ಅಳವಡಿಸಲು ಮಾತ್ರ ಪರವಾನಿಗೆ ಇತ್ತು. ದುರ್ಘಟನೆಗೆ ಕಾರಣವಾದ ಜಾಹೀರಾತು ಫಲಕ 120*120 ಅಡಿ ಇತ್ತು. ಈ ವಿಚಾರ ಬಹಿರಂಗವಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದ.

ಮೇ 12ರ ಸಂಜೆ ಘಾಟ್‍ಕೋಪರ್‌ನಲ್ಲಿ ಗಾಳಿ ಮಳೆಗೆ ಬೃಹತ್ ಜಾಹೀರಾತು ಫಲಕ ಕುಸಿದು ಬಿದ್ದಿತ್ತು. ಇದರ ಪರಿಣಾಮ ಮಳೆಯಿಂದಾಗಿ ಪೆಟ್ರೋಲ್ ಬಂಕ್‍ನಲ್ಲಿ ನಿಂತುಕೊಂಡಿದ್ದ 16 ಮಂದಿ ಸಾವಿಗೀಡಾಗಿದ್ದರು. ಘಟನೆಯಲ್ಲಿ 75 ಮಂದಿ ಗಾಯಗೊಂಡಿದ್ದರು.

Vishwa News 24

Recent Posts

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

35 minutes ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

51 minutes ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

58 minutes ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

1 hour ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

1 hour ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

2 hours ago