ಮುಕೇಶ್ ಅಂಬಾನಿ ಪುತ್ರ ಬಿಜೆಪಿಗೆ ಬೆಂಬಲ ; ಪ್ರಧಾನಿ ಮೋದಿ ರ‍್ಯಾಲಿಯಲ್ಲಿ ಅನಂತ್ ಅಂಬಾನಿ -Vishwanews24

Featured, ರಾಷ್ಟ್ರ ನ್ಯೂಸ್

ಮುಂಬೈ: ಕಳೆದ ವಾರ ಮುಂಬೈ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಮಿಲಿಂದ್ ದೇವರಾ ಅವರ ಉಮೇದುವಾರಿಕೆಯನ್ನು ಬೆಂಬಲಿಸಿದ್ದ ರಿಲಯನ್ಸ್ ಇಂಡಸ್ಟ್ರೀಸ್‌ನ ಅಧ್ಯಕ್ಷ ಮುಕೇಶ್ ಅಂಬಾನಿಯವರ ಪುತ್ರ ಅನಂತ್ ಅಂಬಾನಿ ಅವರು ಶುಕ್ರವಾರ ಇಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬಹಿರಂಗ ಸಭೆಯಲ್ಲಿ ಮುಂದಿನ ಸಾಲಿನಲ್ಲಿ ಆಸೀನರಾಗಿದ್ದು ಹಲವರು ಹುಬ್ಬೇರಿಸುವಂತೆ ಮಾಡಿತ್ತು.

ಮುಂಬೈಯ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಲ್ಲಿ ಶುಕ್ರವಾರ ನಡೆದ ಸಮಾವೇಶದಲ್ಲಿ ಪ್ರೇಕ್ಷಕರ ಗ್ಯಾಲರಿಯ ಮೊದಲ ಸಾಲಿನಲ್ಲಿ ಅನಂತ್  ಕುಳಿತಿದ್ದರು. ಈ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ದೇಶವನ್ನು ಬೆಂಬಲಿಸಲು ಮತ್ತು ಪ್ರಧಾನಿ ಮೋದಿ ಅವರ ಭಾಷಣ ಕೇಳಲು ಆಗಮಿಸಿದ್ದೇನೆ ಎಂದು ಹೇಳಿದ್ದಾರೆ.

ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ತನ್ನ ಕಿರಿಯ ಸೋದರ ಅನಿಲ ಅಂಬಾನಿ ವಿರುದ್ಧ ಎಡೆಬಿಡದೆ ದಾಳಿ ನಡೆಸುತ್ತಿದ್ದರೂ ಮುಕೇಶ ಆ ಪಕ್ಷದ ಅಭ್ಯರ್ಥಿ ದೇವರಾಗೆ ಬೆಂಬಲ ವ್ಯಕ್ತಪಡಿಸಿ ಅಚ್ಚರಿ ಮೂಡಿಸಿದ್ದರು.ಇದೀಗ ಅವರ ಪುತ್ರ ಬಿಜೆಪಿ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಮೂಲಕ ಇನ್ನೊಂದು ಅಚ್ಚರಿಯನ್ನು ಮೂಡಿಸಿದ್ದಾರೆ.