ಮುಂಬೈ: ಕಳೆದ ವಾರ ಮುಂಬೈ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಮಿಲಿಂದ್ ದೇವರಾ ಅವರ ಉಮೇದುವಾರಿಕೆಯನ್ನು ಬೆಂಬಲಿಸಿದ್ದ ರಿಲಯನ್ಸ್ ಇಂಡಸ್ಟ್ರೀಸ್‌ನ ಅಧ್ಯಕ್ಷ ಮುಕೇಶ್ ಅಂಬಾನಿಯವರ ಪುತ್ರ ಅನಂತ್ ಅಂಬಾನಿ ಅವರು ಶುಕ್ರವಾರ ಇಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬಹಿರಂಗ ಸಭೆಯಲ್ಲಿ ಮುಂದಿನ ಸಾಲಿನಲ್ಲಿ ಆಸೀನರಾಗಿದ್ದು ಹಲವರು ಹುಬ್ಬೇರಿಸುವಂತೆ ಮಾಡಿತ್ತು.
ಮುಂಬೈಯ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಲ್ಲಿ ಶುಕ್ರವಾರ ನಡೆದ ಸಮಾವೇಶದಲ್ಲಿ ಪ್ರೇಕ್ಷಕರ ಗ್ಯಾಲರಿಯ ಮೊದಲ ಸಾಲಿನಲ್ಲಿ ಅನಂತ್ ಕುಳಿತಿದ್ದರು. ಈ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ದೇಶವನ್ನು ಬೆಂಬಲಿಸಲು ಮತ್ತು ಪ್ರಧಾನಿ ಮೋದಿ ಅವರ ಭಾಷಣ ಕೇಳಲು ಆಗಮಿಸಿದ್ದೇನೆ ಎಂದು ಹೇಳಿದ್ದಾರೆ.
ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ತನ್ನ ಕಿರಿಯ ಸೋದರ ಅನಿಲ ಅಂಬಾನಿ ವಿರುದ್ಧ ಎಡೆಬಿಡದೆ ದಾಳಿ ನಡೆಸುತ್ತಿದ್ದರೂ ಮುಕೇಶ ಆ ಪಕ್ಷದ ಅಭ್ಯರ್ಥಿ ದೇವರಾಗೆ ಬೆಂಬಲ ವ್ಯಕ್ತಪಡಿಸಿ ಅಚ್ಚರಿ ಮೂಡಿಸಿದ್ದರು.ಇದೀಗ ಅವರ ಪುತ್ರ ಬಿಜೆಪಿ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಮೂಲಕ ಇನ್ನೊಂದು ಅಚ್ಚರಿಯನ್ನು ಮೂಡಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…