ಮುಖ್ಯಮಂತ್ರಿಗಳು ತನ್ನ ಜವಬ್ದಾರಿಯನ್ನು ಅತ್ಯುತ್ತಮವಾಗಿ ನಿರ್ವಹಿಸುತ್ತಿದ್ದಾರೆ : ಕೋಟ ಶ್ರೀನಿವಾಸ ಪೂಜಾರಿ -Vishwanews24

Featured, ಉಡುಪಿ

ಮುಖ್ಯಮಂತ್ರಿಗಳು ತನ್ನ ಜವಬ್ದಾರಿಯನ್ನು ಅತ್ಯುತ್ತಮವಾಗಿ ನಿರ್ವಹಿಸುತ್ತಿದ್ದಾರೆ : ಕೋಟ ಶ್ರೀನಿವಾಸ ಪೂಜಾರಿ -Vishwanews24

ಕೋಟ: ಮುಖ್ಯಮಂತ್ರಿಗಳ ಕಾರ್ಯನಿರ್ವಹಣೆ ಬಗ್ಗೆ ಪಕ್ಷದಲ್ಲಿ ಯಾವುದೇ ಅಪಸ್ವರವಿಲ್ಲ, ಗೊಂದಲಗಳಿಲ್ಲ. ಮುಖ್ಯಮಂತ್ರಿಗಳು ತನ್ನ ಜವಬ್ದಾರಿಯನ್ನು ಅತ್ಯುತ್ತಮವಾಗಿ ನಿರ್ವಹಿಸುತ್ತಿದ್ದಾರೆ. ಈ ಗೊಂದಲಗಳೆಲ್ಲ ಮಾಧ್ಯಮಗಳ ಸೃಷ್ಟಿ ಎಂದು ವಿಧಾನ ಪರಿಷತ್ ಆಡಳಿತ ಪಕ್ಷದ ನಾಯಕ, ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಅವರು ಇಂದು ಕೋಟ-ಪಡುಕರೆಯಲ್ಲಿ ಮೀನುಗಾರಿಕೆ ಇಲಾಖೆಯ ಅನುದಾನದಲ್ಲಿ ಅಭಿವೃದ್ಧಿಗೊಳಿಸಲಾದ ರಸ್ತೆಯ ವೀಕ್ಷಣೆಗೆ ಆಗಮಿಸಿದ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದರು.

ಮುಖ್ಯಮಂತ್ರಿಗಳು ಕೋವಿಡ್ ನಿರ್ವಹಣೆಯಲ್ಲೂ ಅತ್ಯುತ್ತಮವಾದ ಕೆಲಸಗಳನ್ನು ಮಾಡಿದ್ದಾರೆ. ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಬೇಡಿಕೆಗಳು ಬಂದರೆ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ರಾಷ್ಟ್ರೀಯ ಅಧ್ಯಕ್ಷರು, ರಾಷ್ಟ್ರೀಯ ನಾಯಕರು ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.