ಪಡುಬಿದ್ರಿ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾಪು ಕ್ಷೇತ್ರದ ಅಭಿವೃದ್ಧಿಗಾಗಿ 25 ಕೋಟಿ ರೂ. ಅನುದಾನವನ್ನು ನೀಡಿರುತ್ತಾರೆ. ಕ್ಷೇತ್ರದ ಶಾಸಕನಾಗಿ ವಿವಿಧ ಅನುದಾನವನ್ನು ಬಳಸಿಕೊಂಡು ಗ್ರಾಮದ ಅಭಿವೃದ್ಧಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ಕಾಪು ಕ್ಷೇತ್ರದ ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು.
ಅವರು ಸೆ.24ರಂದು ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ ನಡೆದ ಬಡಾಗ್ರಾಮ ಪಂಚಾಯತ್ ಇದರ 2019-20ನೇ ಸಾಲಿನ ಪ್ರಥಮ ಗ್ರಾಮಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಕಾಪು ಪುರಸಭೆಗೆ ಸೇರ್ಪಡೆೆಗೊಳಿಸುವ ಬಗ್ಗೆ ಗ್ರಾಮಸ್ಥರಿಗೆ ಮತ್ತಷ್ಟು ಅನ್ಯಾಯ ಆಗಬಾರದು. ಆ ನಿಟ್ಟಿನಲ್ಲಿ ಸಾಧಕ, ಬಾಧಕದ ಬಗ್ಗೆ ಚರ್ಚಿಸಲು ವಿಶೇಷ ಗ್ರಾಮಸಭೆಯನ್ನು ಕರೆಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದು ನಿರ್ಣಯ ಕೈಗೊಳ್ಳಲಾಯಿತು.
ನಗರಾಭಿವೃದ್ಧಿ ಅಧಿಕಾರಿ ಒಂದು ದಿನವಾದರೂ ಸಂಪೂರ್ಣವಾಗಿ ಸಮರ್ಪಕವಾಗಿ ಕರ್ತವ್ಯ ನಿಭಾಯಿಸುವಂತೆ ವ್ಯವಸ್ಥೆ ಕಲ್ಪಿಸಲು ಶಾಸಕರಲ್ಲಿ ಕೋರಿಕೊಂಡರು. ಎರ್ಮಾಳುನಲ್ಲಿ ತಡೆರಹಿತ ಬಸ್ಸು ನಿಲುಗಡೆಯನ್ನು ಕಡ್ಡಾಯಗೊಳಿಸುವಂತೆ ಬಂದ ಅರ್ಜಿಯನ್ನು ಸಭೆಗೆ ತಿಳಿಸಲಾಯಿತು. ಬಡಾ ಎರ್ಮಾಳಿನಲ್ಲಿ ಕೆಪಿಎಸ್ ಶಾಲೆ ಆರಂಭಿಸಲು ಒತ್ತಾಯ ಕೇಳಿ ಬಂದಿತ್ತು.
ಸಿಬಂದಿ ಚಂದ್ರಾವತೀ ವಿ.ಆಚಾರ್ಯ ವರದಿ ವಾಚಿಸಿದರು. ಕಾರ್ಯದರ್ಶಿ ಪೂರ್ಣಿಮಾ ಎಂ.ಬಂಗೇರ ವಂದಿಸಿದರು. ಸಿಬಂದಿ ವರ್ಗ, ಗ್ರಾಮಸ್ಥರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…