Featured

ಮುಖ್ಯಮಂತ್ರಿಯಿಂದ ಕೆ.ಎಸ್.ಎಫ್.ಸಿ. ಕಿರುಹೊತ್ತಿಗೆ ಬಿಡುಗಡೆ -Vishwanews24

ಮುಖ್ಯಮಂತ್ರಿಯಿಂದ ಕೆ.ಎಸ್.ಎಫ್.ಸಿ. ಕಿರುಹೊತ್ತಿಗೆ ಬಿಡುಗಡೆ -Vishwanews24

ಉಡುಪಿ: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ (ಕೆ.ಎಸ್.ಎಫ್.ಸಿ) ಯು ದೇಶದಲ್ಲೇ ರಾಜ್ಯ ಹಣಕಾಸು ಸಂಸ್ಥೆಗಳಲ್ಲಿ ಮುಂಚೂಣಿ ಹಣಕಾಸು ಸಂಸ್ಥೆಯಾಗಿದೆ. ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ಉದ್ಯಮಗಳ ದೀರ್ಘಕಾಲೀನ ಮತ್ತು ಅಲ್ಪಾವಧಿಯ ಆರ್ಥಿಕ ಅಗತ್ಯಗಳನ್ನು ಪೂರೈಸಲು ೧೯೫೯ ರಲ್ಲಿ ಕೆ.ಎಸ್.ಎಫ್.ಸಿ ಯು ಅಸ್ತಿತ್ವಕ್ಕೆ ಬಂದಿದ್ದು, ಸಂಸ್ಥೆಯು ರಾಜ್ಯದಲ್ಲಿ ಸಾಮಾಜಿಕ-ಆರ್ಥಿಕ ಬದಲಾವಣೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದೆ.

ರಾಜ್ಯದ ಸುಸ್ಥಿರ ಆರ್ಥಿಕ ಮತ್ತು ಕೈಗಾರಿಕಾ ಬೆಳವಣಿಗೆಗೆ ಸೂಕ್ಷö್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸ್ಥಾಪನೆಗೆ ಮತ್ತು ಅಭಿವೃದ್ಧಿಗೆ ಸಹಾಯ ಮಾಡುತ್ತಿದ್ದು, ಇಂದು ೨೨೦೮ ಕೋಟಿ ರೂ. ಆಸ್ತಿ ಹೊಂದಿ, ದೇಶದ ಪ್ರಮುಖ ರಾಜ್ಯ ಹಣಕಾಸು ನಿಗಮಗಳಲ್ಲಿ ಒಂದಾಗಿದೆ.

ಕೆ.ಎಸ್.ಎಫ್.ಸಿ ಯು ತನ್ನ ಸ್ಥಾಪಿತ ಅವಧಿಯಲ್ಲಿ ೧೧ ಘಟಕಗಳಿಗೆ ೨೮ ಲಕ್ಷ ರೂ. ಸಾಲ ಮಂಜೂರು ಮಾಡಿದ್ದು, ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಶಾಖೆಗಳ ಮೂಲಕ ೧,೭೫,೦೦೦ ಕ್ಕೂ ಹೆಚ್ಚು ಘಟಕಗಳಿಗೆ ೧೮,೦೦೦ ಕೋಟಿ ರೂ. ಗೂ ಹೆಚ್ಚು ಸಂಚಿತ ಸಾಲ ಮಂಜೂರು ಮಾಡಿದೆ. ಇದರಲ್ಲಿ ಶೇ. ೫೦ ಕ್ಕಿಂತ ಹೆಚ್ಚು ಸಾಲಗಳನ್ನು ಸಣ್ಣ ಪ್ರಮಾಣದ ಕೈಗಾರಿಕೆಗಳಿಗೆ ನೀಡಿದ್ದು, ಸಂಸ್ಥೆಯು ರಾಜ್ಯದ ಕೈಗಾರಿಕಾ ಅಭಿವೃದ್ಧಿಯಲ್ಲಿಯೂ ಸಹ ಪ್ರಮುಖ ಪಾತ್ರ ವಹಿಸುತ್ತದೆ. ಸಂಸ್ಥೆಯು ೨೦೧೯-೨೦ ರ ಆರ್ಥಿಕ ವರ್ಷದಲ್ಲಿ ೪೪.೯೨ ಕೋಟಿ ರೂ. ಗಳ ನಿರ್ವಹಣಾ ಲಾಭವನ್ನೂ ಸಹ ಗಳಿಸಿರುತ್ತದೆ.

ಕೆ.ಎಸ್.ಎಫ್.ಸಿ ಯು ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದ್ದು, ಸಂಸ್ಥೆಯಿAದ ಹಣಕಾಸು ನೆರವು ಪಡೆದು ಯಶಸ್ವಿಯಾದ ಕೆಲವು ಉದ್ಯಮಿಗಳ ಯಶೋಗಾಥೆಯನ್ನು ಒಳಗೊಂಡ, ಕೇಂದ್ರ ಹಾಗೂ ರಾಜ್ಯ ಸಾರ್ವಜನಿಕ ಉದ್ಯಮಗಳ ಸಹಾಯದಿಂದ Triumphant Sixty ಕಿರುಹೊತ್ತಿಗೆಯನ್ನು ಕೆ.ಎಸ್.ಎಫ್.ಸಿ ಯ ೬೦ ನೇ ವರ್ಷದ ವಜ್ರಮಹೋತ್ಸವ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜನವರಿ ೩೦ ರಂದು ವಿಧಾನ ಸೌಧದ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಡಿಸಿಎಂ ಅಶ್ವಥ ನಾರಾಯಣ, ಶಿಕ್ಷಣ ಸಚಿವ ಸುರೇಶ್ ಕುಮಾರ್, ಕೆ.ಎಸ್.ಎಫ್.ಸಿ ವ್ಯವಸ್ಥಾಪಕ ನಿರ್ದೇಶಕ ಏಕ್‌ರೂಪ್ ಕೌರ್, ಕೆ.ಎಸ್.ಎಫ್.ಸಿ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಸಿ. ಶಿವಪ್ರಕಾಶ್ ಮತ್ತು ಜಿ.ವಿ ಚಂದ್ರಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

2 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

2 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

3 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

3 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

7 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

7 hours ago