ಬೆಂಗಳೂರು, : ನಾನು ಮುಖ್ಯಮಂತ್ರಿ ಆಗಿದ್ದಾಗ ನನ್ನ ಬಳಿ ಎಲ್ಲ ಕೆಲಸಗಳನ್ನು ಮಾಡಿಸಿಕೊಂಡ ಶಾಸಕರೇ ಇದೀಗ ನನ್ನ ಬೆನ್ನಿಗೆ ಚೂರಿ ಹಾಕಿ ಹೋಗಿದ್ದಾರೆ. ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ರವಿವಾರ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮತನಾಡಿದ ಸಿದ್ದರಾಮಯ್ಯ, ಕೆಲ ಶಾಸಕರು ನನಗೆ ಆಪ್ತರು. ನಾನೇ ಅವರನ್ನು ಕಳುಹಿಸಿದ್ದೇನೆ ಎಂದು ಅಪ ಪ್ರಚಾರ ಮಾಡಲಾಗುತ್ತಿದೆ. ಹೋದವರಷ್ಟೇ ಅಲ್ಲ, ಇಲ್ಲಿ ಇರುವವರೂ ನನಗೆ ಆಪ್ತರು. ನಾನು ನಿಮ್ಮಲ್ಲಿ ಯಾರಿಗಾದರೂ ಬಿಜೆಪಿಗೆ ಹೋಗುವಂತೆ ಹೇಳಿದ್ದೀನಾ. ಅಂತಹ ನೀಚ ಕೆಲಸವನ್ನು ನಾನು ಮಾಡಲಾರೆ. ಇವರು ಮಾಡಿದ ಕೆಲಸದಿಂದ ನೋವಾಗಿದೆ ಎಂದರು.
ಬಸವರಾಜು, ಸೋಮಶೇಖರ, ಮುನಿರತ್ನ ಹೇಳಿದ ಕೆಲಸವನ್ನೆಲ್ಲ ಮಾಡಿಕೊಟ್ಟೆ. ಅವರೇ ಚೂರಿ ಹಾಕಿದರು. ನನ್ನ ಬಗ್ಗೆ ಅಪಪ್ರಚಾರ ಮಾಡಿದರೆ ಸಿಗುವ ಲಾಭವಾದರೂ ಏನು ? ಎಂಟಿಬಿ, ಮುನಿರತ್ನ, ಸುಧಾಕರ್ ಜೊತೆ ಗಂಟೆಗಟ್ಟಲೆ ಮಾತನಾಡಿದಾಗ ನಾವೂ ಎಲ್ಲೂ ಹೋಗುವುದಿಲ್ಲ ಎಂದು ಹೇಳಿ ಕೈ ಕೊಟ್ಟರು. ಮೋಸ ಮಾಡಿದರು. ಇದಕ್ಕಿಂತ ನೋವು ಇನ್ನೇನು ಆಗಬೇಕು ಎಂದು ಬೇಸರಿಸಿದರು.
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…