Featured

ಮುಖ್ಯಮಂತ್ರಿ ಆಗಿ ನಾನೇ ಮುಂದುವರಿಯುತ್ತೇನೆ ; ಬಿಜೆಪಿಯ ಬಣ್ಣದ ಮಾತುಗಳಿಗೆ ಮರುಳಾಗಬೇಡಿ : ಸಿದ್ಧರಾಮಯ್ಯ – vishwanews24

ಬಿಜೆಪಿ ಅವರಿಗೆ ಸುಳ್ಳು ಹೇಳುವುದು ಬಿಟ್ಟರೆ ಏನು ಬರಲ್ಲ : ಸಿಎಂ ಸಿದ್ಧರಾಮಯ್ಯ

ಬಳ್ಳಾರಿ : ನಿನ್ನೆಯಷ್ಟೇ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನ ಲೋಕಾಯುಕ್ತ ಕಚೇರಿಗೆ ತೆರಳಿ ಅಧಿಕಾರಿಗಳ ವಿಚಾರಣೆಯನ್ನು ಎದುರಿಸಿದರು. ಇದೀಗ ಬಳ್ಳಾರಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಆಗಿ ನಾನೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚೋರನೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನನ್ನು ಬಿಜೆಪಿ ಜೆಡಿಎಸ್ ನವರು ಮುಗಿಸುವುದಕ್ಕೆ ಹೊರಟಿದ್ದಾರೆ. ಸಿದ್ದರಾಮಯ್ಯ ಮುಗಿಸಿದರೇ ಕಾಂಗ್ರೆಸ್ ಮುಗಿಸಿದಂತೆ ಅಂದುಕೊಂಡಿದ್ದಾರೆ. ಆದರೆ ಆಶೀರ್ವಾದ ಇರುವವರೆಗೂ ನನ್ನನ್ನು ಮುಗಿಸುವುದಕ್ಕೆ ಆಗಲ್ಲ ಎಂದರು.

ಬಿಜೆಪಿ ನಾಯಕರು ಬಣ್ಣದ ಮಾತುಗಳಿಗೆ ನೀವು ಮರುಳಾಗಬೇಡಿ ನನ್ನ ಮತ್ತು ಶಾಸಕ ಬಿ. ನಾಗೇಂದ್ರ ವಿರುದ್ಧ ಸುಳ್ಳು ಕೇಸ್ ಹಾಕಿಸಿದ್ದಾರೆ. ಆದಾಯ ತೆರಿಗೆ ಇಲಾಖೆ ಸಿಬಿಐ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಟೀಕೆ ಮಾಡಿದವರನ್ನು ಮುಗಿಸಲು ಹೊರಟಿದ್ದಾರೆ.ಅನ್ನಪೂರ್ಣ ಗೆದ್ದರೆ ತುಕಾರಾಮ ಮಾಡಿದ ಕೆಲಸ ಮುಂದುವರಿಸುತ್ತಾರೆ ಎಂದು ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬಿಜೆಪಿ ಅವರಿಗೆ ಸುಳ್ಳು ಹೇಳುವುದು ಬಿಟ್ಟರೆ ಏನು ಬರಲ್ಲ. 2023ರ ಚುನಾವಣೆಯಲ್ಲಿ 136 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ಅಧಿಕಾರಕ್ಕೆ ಬಂದ ಒಂದೇ ದಿನದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಮಹಿಳೆಯರು ಶಕ್ತಿ ಯೋಜನೆಯ ಅಡಿ ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಗೃಹಜೋತಿ ಯೋಜನೆ ಅಡಿ 1.61 ಕುಟುಂಬಕ್ಕೆ ಉಚಿತ ವಿದ್ಯುತ್ ಪೂರೈಕೆ ಆಗುತ್ತಿದೆ. ಬಿ ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜನಾರ್ದನ ರೆಡ್ಡಿ ಇಂತಹ ಯೋಜನೆಗಳನ್ನು ಕೊಟ್ಟಿದ್ರಾ? ಎಂದು ಪ್ರಶ್ನಿಸಿದ್ದಾರೆ.

ಆದರೂ ಕಾಂಗ್ರೆಸ್ ಪಕ್ಷವನ್ನು ಬೈದುಕೊಂಡು ತಿರುಗಾಡುತ್ತಿದ್ದಾರೆ. ಹಣ ಕೊಟ್ಟು ಮತ ಹಾಕಿಸಿಕೊಳ್ಳುತ್ತಾರೆ ಆದರೆ ಜನರ ಬಳಿ ಇದ್ದವರು ಗೆಲ್ಲಲ್ಲ. 8 ದಿನ ಜನರ ಬಳಿ ಇದ್ದವರೇ ಗೆಲ್ಲೋದು ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಎಚ್ ಡಿ ಕುಮಾರಸ್ವಾಮಿಯೇ ಈ ಮಾತು ಹೇಳಿದ್ದಾರೆ. 2018 ರ ಚುನಾವಣೆಯಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿತು.

600 ಭರವಸೆ ಘೋಷಿಸಿ ಅದರಲ್ಲಿ 10% ಕೂಡ ಜಾರಿ ಮಾಡಿಲ್ಲ ಮೊದಲ ಕ್ಯಾಬಿನೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡುತ್ತೇವೆ ಅಂದಿದ್ದರು. ಬಿಜೆಪಿಯವರು ರೈತರ ಸಾಲ ಮನ್ನಾ ಮಾಡಿದ್ರಾ ಎಂದು ವಾಗ್ದಾಳಿ ನಡೆಸಿದರು. ಸಂಡೂರು ತಾಲೂಕಿನಲ್ಲಿ 22 ಕೋಟಿ ಸಾಲ ಮನ್ನಾ ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago