ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಕೊರೊನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿದ್ರೂ ಉತ್ತಮ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಕೊರೊನಾ ನಿಗ್ರಹ, ಪ್ರವಾಹ ಪರಿಸ್ಥಿತಿಯನ್ನ ಸಮರ್ಪಕವಾಗಿ ಎದುರಿಸಲಿದೆ ಅಂತ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾದ ನಾಗಲೋಟ ಮುಂದುವರಿಯುತ್ತಿದೆ. ಅದೇ ರೀತಿ ಹೆಚ್ಚಿನ ಜನರ ಸಹ ಗುಣಮುಖರಾಗ್ತಿದ್ದಾರೆ. ಇದರ ಜೊತೆ ಜೊತೆಗೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅಧಿಕ ಮಳೆ ಕೂಡ ಆಗ್ತಿದೆ. ಇದರ ಎಲ್ಲಾ ಹೊಣೆಗಾರಿಕೆಯನ್ನು ಸರ್ಕಾರ ಸಮರ್ಥವಾಗಿ ಮಾಡುತ್ತಿದೆ ಎಂದರು.
ಮುಖ್ಯಮಂತ್ರಿಗಳು ಆಸ್ಪತ್ರೆಯಲ್ಲಿದ್ರೂ ಕೂಡ ಅಲ್ಲಿಂದಲೇ ಸಂಬಂಧಪಟ್ಟ ಮಂತ್ರಿಗಳು ಹಾಗೂ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಈಗಾಗಲೇ ಕಂದಾಯ ಸಚಿವ ಅಶೋಕ್ ಕೆಲ ಜಿಲ್ಲೆಗಳಿಗೆ ಇಂದಿನಿಂದ ಭೇಟಿ ಮಾಡ್ತಿದ್ದಾರೆ. ಸಿಎಂ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಮಗ್ರವಾದ ಮಾಹಿತಿ ಕಲೆಹಾಕುವುದರ ಸ್ಪಷ್ಟ ಸೂಚನೆಗಳನ್ನು ಕೊಟ್ಟಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಆಪತ್ತಿಗೆ ಒಳಗಾಗುವ ಜನರನ್ನು ಸ್ಥಳಾಂತರ ಮಾಡುವ ಕಾಯಕ ಮಾಡಲಾಗುವುದು. ಹಾಗಾಗಿ ಸರ್ಕಾರ ಅಭಿವೃದ್ಧಿ ಸೇರಿದಂತೆ ಕೋರೋನಾ ನಿಗ್ರಹ ಸೇರಿದಂತೆ ಪ್ರವಾಹ ಪರಿಸ್ಥಿತಿಯನ್ನ ಸಮರ್ಪಕವಾಗಿ ನಿಭಾಯಿಸಲಿದೆ ಎಂದು ತಿಳಿಸಿದರು.
ಸಿಎಂ ಅವರು ದೈಹಿಕವಾಗಿ ಇರಬೇಕು ಅಂತಿಲ್ಲ. ಆಸ್ಪತ್ರೆಯಲ್ಲಿದ್ರೂ ಮಾನಸಿಕವಾಗಿ ಅವರ ಆದೇಶ ಅತಿ ಮುಖ್ಯ. ಅವರ ಏನು ಸೂಚನೆ ಕೊಡಬೇಕಾಗಿತ್ತೋ ಅದನ್ನು ಆಸ್ಪತ್ರೆಯಿಂದಲೇ ಕೊಟ್ಟಿದ್ದಾರೆ. ಆಸ್ಪತ್ರೆಯಲ್ಲಿದ್ರೂ ಸಿಎಂ ಯಾವ ರೀತಿ ಪರಿಣಾಮಕಾರಿಯಾಗಿ ಕೆಲಸ ಮಾಡ್ತಿದ್ದಾರೆ ಅಂತ ಜನ ಗಮನಿಸಬೇಕು ಅಂತ ಮನವಿ ಮಾಡಿಕೊಂಡರು
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…