ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರದ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ವಿಧಾನಸೌಧ ಎಲ್ಲಾ ದ್ವಾರಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಪೊಲೀಸ್ ಕಮೀಷನರ್ ಅಲೋಕ್ ಕುಮಾರ್ ನೇತೃತ್ವದಲ್ಲಿ ಭಾರಿ ಭದ್ರತೆ ಮಾಡಲಾಗಿದೆ. ಓರ್ವ ಹೆಚ್ಚುವರಿ ಪೊಲೀಸ್ ಆಯುಕ್ತ, 5 ಡಿಸಿಪಿಗಳು, 20 ಎಸಿಪಿಗಳು, 25 ಕೆಎಸ್ಆರ್‌ಪಿ ತುಕಡಿ, 21 ಸಿಎಆರ್ ತುಕಡಿ ನಿಯೋಜಿಸಲಾಗಿದೆ.
ಜತೆಗೆ ಕ್ಷಿಪ್ರ ಕಾರ್ಯಾಚರಣೆ ಪಡೆ ಮತ್ತು ವಾಟರ್ ಜೆಟ್ ಕೂಡ ನಿಯೋಜನೆ ಮಾಡಲಾಗಿದ್ದು, ವಿಧಾನಸೌಧ ಸುತ್ತ ಎರಡು ಕಿಮೀ ವ್ಯಾಪ್ತಿಯಲ್ಲಿ 114ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 5ಕ್ಕಿಂತ ಹೆಚ್ಚು ಜನ ಗುಂಪು ಸೇರುವುದು, ಸಂಭ್ರಮಾಚರಣೆ, ಘೋಷಣೆ ಕೂಗುವುದು, ಪ್ರತಿಭಟನೆ, ಧರಣಿ, ಸತ್ಯಾಗ್ರಹ ನಡೆಸುವುದಕ್ಕೆ ನಿಷೇಧಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕೆಗೆ ಸೂಚಿಸಲಾಗಿದೆ.
ಮೈತ್ರಿ ಸರಕಾರ ಪತನದ ಭೀತಿ ಎದುರಿಸುತ್ತಿರುವ ಜೆಡಿಎಸ್ ಕೊನೇ ಅಸ್ತ್ರವಾಗಿ ಪಕ್ಷಾಂತರ ನಿಷೇಧ ಕಾಯ್ದೆ ಬಳಸಲು ಮುಂದಾಗಿದೆ. ತನ್ನ ಮೂವರು ಬಂಡಾಯ ಶಾಸಕರ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆ ಜಾರಿಗೊಳಿಸಿದೆ. ಸದ್ಯಕ್ಕೆ ಆಡಳಿತ ಮೈತ್ರಿಕೂಟ ಮತ್ತು ಪ್ರತಿಪಕ್ಷಗಳೆರಡೂ ಸಂಖ್ಯಾಬಲ ತಮ್ಮ ಪರವಾಗಿಯೇ ಇದೆ ಎಂದು ಪ್ರತಿಪಾದಿಸುತ್ತಿವೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…