Featured

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು : ಐವನ್‌ ಡಿಸೋಜ -Vishwanews24

ಮಂಗಳೂರು: ‘ಆಪರೇಷನ್‌ ಕಮಲ’ದ ಮೂಲಕ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರ ರಾಜೀನಾಮೆ ಕೊಡಿಸಿರುವುದನ್ನು ಒಪ್ಪಿಕೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜ ಆಗ್ರಹಿಸಿದರು.

ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯಡಿಯೂರಪ್ಪ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಜತೆಗೂಡಿ ನಮ್ಮ ಪಕ್ಷಗಳ ಶಾಸಕರನ್ನು ಆಮಿಷವೊಡ್ಡಿ ರಾಜೀನಾಮೆ ಕೊಡಿಸಿದ್ದಾರೆ. ಯಡಿಯೂರಪ್ಪ ಅವರೇ ಒಪ್ಪಿಕೊಂಡಿರುವ ಆಡಿಯೊ ಈಗ ಸುಪ್ರೀಂಕೋರ್ಟ್‌ ಮುಂದಿದೆ. ಇನ್ನು ಅವರು ಅಧಿಕಾರದಲ್ಲಿ ಮುಂದುವರಿಯಬಾರದು’ ಎಂದರು.

ಆಡಿಯೊದಲ್ಲಿರುವ ಧ್ವನಿ ತನ್ನದೇ ಎಂದು ಯಡಿಯೂರಪ್ಪ ಅವರು ಮೊದಲು ಒಪ್ಪಿಕೊಂಡಿದ್ದರು. ಈಗ ತಮ್ಮ ಹೇಳಿಕೆಯನ್ನು ತಿರುಚಲಾಗಿದೆ ಎಂದು ಹೇಳುತ್ತಿದ್ದಾರೆ. ಆಡಿಯೊ ಬಹಿರಂಗವಾದ ಬಳಿಕ ಗಲಿಬಿಲಿಗೊಂಡಿರುವ ಅವರು ತಮ್ಮನ್ನು ಭೇಟಿ ಮಾಡಲು ಬರುವವರು ಮೊಬೈಲ್‌ ತರದಂತೆ ನಿರ್ಬಂಧ ಹೇರಿದ್ದಾರೆ ಎಂದು ಟೀಕಿಸಿದರು.

2008ರಲ್ಲಿ ಕೂಡ ಬಿಜೆಪಿ ಆಪರೇಷನ್‌ ಕಮಲದ ಮೂಲಕ ವಿರೋಧ ಪಕ್ಷಗಳ ಶಾಸಕರನ್ನು ಸೆಳೆದುಕೊಂಡಿತ್ತು. 2018ರಲ್ಲೂ ಅದನ್ನೇ ಮಾಡುತ್ತಿದೆ. ಆಪರೇಷನ್‌ ಕಮಲ ನಡೆಸುತ್ತಿಲ್ಲ ಎಂದು ಬಿಜೆಪಿ ನಾಯಕರು ಪದೇ ಪದೇ ಹೇಳುತ್ತಿದ್ದರು. ಈಗ ಅವರ ನಿಜ ಬಣ್ಣ ಬಯಲಾಗಿದೆ ಎಂದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago