ಚಿತ್ರದುರ್ಗ: ” ಮುಖ್ಯಮಂತ್ರಿ ಯಡಿಯೂರಪ್ಪಗೆ ಧಮ್ ಇಲ್ಲ. ಪ್ರಧಾನಿ ಮೋದಿ ತಾಳಕ್ಕೆ ಸಿಎಂ ಕುಣಿಯುತ್ತಿದ್ದಾರೆ” ಎಂಬ ಸಿದ್ದರಾಮಯ್ಯ ಅವರ ಮಾತಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದು, ” ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಶಕ್ತಿ ಏನು ಅನ್ನೋದನ್ನು ಕಾಲಕಾಲಕ್ಕೆ ರಾಜ್ಯದ ಜನತೆ ತೋರಿಸಿದ್ದಾರೆ. ಹೀಗಾಗಿಯೇ ಇಂದು ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿ ಕುಳಿತಿದ್ದಾರೆ ” ಎಂದರು.
ಚಿತ್ರದುರ್ಗದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರದಿಂದ ಅತೀ ಹೆಚ್ಚು ಅನುದಾನ ತಂದಿದ್ದಾರೆ. ಜಿಎಸ್ ಟಿಗೆ ಸಂಬಂಧಿಸಿ 4300 ಕೋಟಿ ರೂ ಅನುದಾನ ತರುವಲ್ಲಿಯೂ ಯಶಸ್ವಿಯಾಗಿದ್ದಾರೆ ಎಂದು ಹೇಳಿದರು.
ಇದೇ ವೇಳೆ ವಿಧಾನ ಪರಿಷತ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಎಚ್. ವಿಶ್ವನಾಥ್ ಅಸಮಾಧಾನಗೊಂಡಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ವಿಶ್ವನಾಥ್ ಅವರಿಗೆ ಮುಖ್ಯಮಂತ್ರಿಗಳ ಮೇಲೆ ವಿಶ್ವಾಸವಿದೆ. ಶೀಘ್ರದಲ್ಲೇ ಅವರಿಗೆ ಸೂಕ್ತ ಸ್ಥಾನಮಾನ ಸಿಗಲಿದೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…