Featured

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ – vishwanews24

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿದ್ದ ತೀವ್ರ ಕುತೂಹಲ ಮತ್ತು ಹೈಡ್ರಾಮಾಗೆ ಕೊನೆಗೂ ಭಾವುಕ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಅಧಿಕಾರದಿಂದ ಕೆಳಗೆ ಇಳಿದಿದ್ದಾರೆ.

ರಾಜೀನಾಮೆ ಸಲ್ಲಿಕೆಗೂ ಮುನ್ನ ಇಂದು ಬೆಳಿಗ್ಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಚಿವರ ಕೊನೆಯ ‘ಬ್ರೇಕ್‌ಫಾಸ್ಟ್‌ ಮೀಟಿಂಗ್’ ನಡೆಯಿತು. ಕಾವೇರಿ ನಿವಾಸದ ಅಂಗಳ ಸದಾ ಜನಸಾಗರದಿಂದ, ಅಧಿಕಾರದ ಗಿಜಿಗುಡುವಿಕೆಯಿಂದ ತುಂಬಿರುತ್ತಿತ್ತು. ಆದರೆ ಇಂದು ಅಲ್ಲಿ ಆವರಿಸಿದ್ದ ಮೌನವೇ ಬೇರೆಯಾಗಿತ್ತು.

ಇದನ್ನೂ ಓದಿ:

ಉಪಹಾರ ಸಭೆಯಲ್ಲಿ ಭಾಗಿಯಾಗಿದ್ದ ಪ್ರಮುಖ ಮಂತ್ರಿಗಳು ಮತ್ತು ಆಪ್ತ ನಾಯಕರು ಸಿದ್ದರಾಮಯ್ಯ ಅವರ ಸುದೀರ್ಘ ಹೋರಾಟದ ಪಯಣವನ್ನು ನೆನೆದು ಭಾವುಕರಾದರು. ಹಲವು ಸಚಿವರ ಕಣ್ಣಾಲಿಗಳು ತೇವಗೊಂಡಿದ್ದವು. ಸಹೋದ್ಯೋಗಿ ಮಂತ್ರಿಗಳಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ ಮಧ್ಯಾಹ್ನ ಭೋಜನ ಬಳಿಕ ರಾಜೀನಾಮೆ ಪತ್ರ ಹಿಡಿದು ಕಾರಿನಲ್ಲಿ ಲೋಕಭವನದತ್ತ(ರಾಜಭವನ) ತೆರಳಿದರು.

ರಾಜ್ಯಪಾಲರು ಪ್ರಸ್ತುತ ರಾಜಧಾನಿಯಲ್ಲಿ ಇಲ್ಲದ ಕಾರಣ, ಅವರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದರು.

ಸದ್ಯಕ್ಕೆ ರಾಜೀನಾಮೆ ಪತ್ರವನ್ನು ಕಾರ್ಯದರ್ಶಿಗಳು ಸ್ವೀಕರಿಸಿದ್ದರೂ, ಸಂವಿಧಾನದ ನಿಯಮಾವಳಿಗಳ ಪ್ರಕಾರ ರಾಜ್ಯಪಾಲರು ಖುದ್ದಾಗಿ ಸಹಿ ಮಾಡಿದ ಬಳಿಕವೇ ರಾಜೀನಾಮೆ ಅಧಿಕೃತವಾಗಿ ಅಂಗೀಕಾರವಾಗಲಿದೆ. ಮೂಲಗಳ ಪ್ರಕಾರ ರಾಜ್ಯಪಾಲರು ಇಂದು ರಾತ್ರಿ 7:30ಕ್ಕೆ ಬೆಂಗಳೂರಿಗೆ ಮರಳುವ ಸಾಧ್ಯತೆಯಿದೆ. ಹೀಗಾಗಿ ರಾಜ್ಯಪಾಲರು ಮರಳಿದ ಬಳಿಕವಷ್ಟೇ ರಾಜೀನಾಮೆ ಅಂಗೀಕಾರದ ಔಪಚಾರಿಕ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ.

ಇದನ್ನೂ ಓದಿ:

ಈ ಮೂಲಕ ಐದು ದಶಕಗಳ ಸುದೀರ್ಘ ರಾಜಕೀಯ ಚರಿತ್ರೆಯ ದಣಿವರಿಯದ ಹೋರಾಟಗಾರ ಸಿದ್ದರಾಮಯ್ಯ ಅವರ ಎರಡನೇ ಅವಧಿಯ ಮುಖ್ಯಮಂತ್ರಿ ಆಡಳಿತ ಅಂತ್ಯ ಕಂಡಿದೆ. ಹೈಕಮಾಂಡ್ ಸೂಚನೆ ಮತ್ತು ರಾಹುಲ್ ಗಾಂಧಿ ಅವರ ಸಂದೇಶಕ್ಕೆ ಗೌರವ ನೀಡಿ, ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸುವ ಮೂಲಕ ರಾಜ್ಯ ರಾಜಕಾರಣದ ಮಹತ್ವದ ಹಂತವೊಂದಕ್ಕೆ ಭಾವುಕ ತೆರೆ ಎಳೆದಿದ್ದಾರೆ.

Vishwa News 24

Recent Posts

ಉಡುಪಿ: ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ – vishwanews24

ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…

3 hours ago

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

5 hours ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

6 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

6 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

6 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

6 hours ago