Featured

ಮುಖ್ಯ ಚುನಾವಣಾಧಿಕಾರಿಯಿಂದ ನೀತಿ ಸಂಹಿತೆ ಸಿದ್ದತೆಗೆ ಜಿಲ್ಲಾಧಿಕಾರಿಗಳಿಗೆ ತುರ್ತು ಸಂದೇಶ-  ಚುನಾವಣೆ ದಿನಾಂಕ ಘೋಷಣೆ ಸುಳಿವು ಕೊಟ್ಟ ಆಯೋಗ – Vishwanews24

ಮುಖ್ಯ ಚುನಾವಣಾಧಿಕಾರಿಯಿಂದ ನೀತಿ ಸಂಹಿತೆ ಸಿದ್ದತೆಗೆ ಜಿಲ್ಲಾಧಿಕಾರಿಗಳಿಗೆ ತುರ್ತು ಸಂದೇಶ-  ಚುನಾವಣೆ ದಿನಾಂಕ ಘೋಷಣೆ ಸುಳಿವು ಕೊಟ್ಟ ಆಯೋಗ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ಪತ್ರದ ಮೂಲಕ ತುರ್ತು ಸೂಚನೆ ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಸಂದೇಶ ನೀಡಿದ್ದು, ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆಯಾಗಬಹುದು. ಹೀಗಾಗಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗಳನ್ನು ಸಿದ್ದವಿಟ್ಟುಕೊಳ್ಳಿ ಎಂದು ಸಂದೇಶ ರವಾನಿಸಲಾಗಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಲು ಕೇಂದ್ರ ಚುನಾವಣೆ ಆಯೋಗ ತಯಾರಿ ನಡೆಸಿದ್ದು, ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ರವಾನಿಸಿದೆ. ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆ ಆಗಬಹುದು. ಈ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಪತ್ರ ಹೋಗಿದೆ. ಹೀಗಾಗಿ ಮಾರ್ಚ್​ 27 ಅಥವಾ 28ರಂದು ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ದಿನಾಂಕ ಘೋಷಣೆ ಸಾಧ್ಯತೆ ಇದೆ.

ಮುಂದಿನ ವಾರದ ಆರಂಭದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಬಹುದು ಎಂದು ನವದೆಹಲಿಯ ಮೂಲಗಳು ತಿಳಿಸಿವೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಇತರ ಇಬ್ಬರು ಚುನಾವಣಾ ಆಯುಕ್ತರಾದ ಅನುಪ್ ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಅವರು ನವದೆಹಲಿಯಲ್ಲಿ ಚುನಾವಣಾ ವೇಳಾಪಟ್ಟಿಯನ್ನು ಘೋಷಣೆ ಮಾಡಲಿದ್ದು, ತಕ್ಷಣ ನೀತಿ ಸಂಹಿತೆ ರಾಜ್ಯಾದ್ಯಂತ ಜಾರಿಗೆ ಬರಲಿದೆ.

Vishwa News 24

Recent Posts

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು – vishwanews24

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…

59 minutes ago

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…

2 hours ago

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…

2 hours ago

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…

2 hours ago

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…

2 hours ago

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

4 days ago