ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ಪತ್ರದ ಮೂಲಕ ತುರ್ತು ಸೂಚನೆ ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಸಂದೇಶ ನೀಡಿದ್ದು, ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆಯಾಗಬಹುದು. ಹೀಗಾಗಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗಳನ್ನು ಸಿದ್ದವಿಟ್ಟುಕೊಳ್ಳಿ ಎಂದು ಸಂದೇಶ ರವಾನಿಸಲಾಗಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಲು ಕೇಂದ್ರ ಚುನಾವಣೆ ಆಯೋಗ ತಯಾರಿ ನಡೆಸಿದ್ದು, ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ರವಾನಿಸಿದೆ. ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆ ಆಗಬಹುದು. ಈ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಪತ್ರ ಹೋಗಿದೆ. ಹೀಗಾಗಿ ಮಾರ್ಚ್ 27 ಅಥವಾ 28ರಂದು ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ದಿನಾಂಕ ಘೋಷಣೆ ಸಾಧ್ಯತೆ ಇದೆ.
ಮುಂದಿನ ವಾರದ ಆರಂಭದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಬಹುದು ಎಂದು ನವದೆಹಲಿಯ ಮೂಲಗಳು ತಿಳಿಸಿವೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಇತರ ಇಬ್ಬರು ಚುನಾವಣಾ ಆಯುಕ್ತರಾದ ಅನುಪ್ ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಅವರು ನವದೆಹಲಿಯಲ್ಲಿ ಚುನಾವಣಾ ವೇಳಾಪಟ್ಟಿಯನ್ನು ಘೋಷಣೆ ಮಾಡಲಿದ್ದು, ತಕ್ಷಣ ನೀತಿ ಸಂಹಿತೆ ರಾಜ್ಯಾದ್ಯಂತ ಜಾರಿಗೆ ಬರಲಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…