ವಿಜಯಪುರ: ಯಡಿಯೂರಪ್ಪ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದೀರಿ, ನಿಮ್ಮ ಬಣ್ಣ ಬಯಲು ಮಾಡ್ತೀನಿ, ಇಲ್ಲವಾದರೆ ಧರ್ಮಸ್ಥಳಕ್ಕೆ ಬಂದು ಆಣೆಪ್ರಮಾಣ ಮಾಡಲಿ ಎಂದು ಡಿವಿಎಸ್‌ಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಎಸೆದಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದಾನಂದಗೌಡ ಬಾಯಿ ಮುಚ್ಚಿಕೊಂಡು ಇರಬೇಕು. ಇಲ್ಲದೆ ಹೋದರೆ ಬಂಡವಾಳ ಬಯಲು ಮಾಡುತ್ತೇನೆ. ನಾನು ವಕ್ಫ್ ವಿರುದ್ಧ ಮಾತನಾಡಿದ್ದೇನೆ. ಸದಾನಂದಗೌಡ ಯಾಕೆ ಗಾಬರಿಯಾಗಬೇಕು? ನೀವು ಗಾಬರಿಯಾಗಬೇಡಿ. ನಾಗರಹಾವು-ಎರೆಹುಳ ಎತ್ತನಿಂದೆತ್ತ ಸಂಬಂಧವಯ್ಯ ಸದಾನಂದ. ನೀನು ಮಾತನಾಡಿದ ಕೃತಿಗೂ ನಿನ್ನ ನಾಲಿಗೆಗೂ ಎತ್ತ ಸಂಬಂಧವಯ್ಯ ಸದಾನಂದ. ಇದು ನನ್ನ ಹೊಸ ವಚನ, ಇದು ನನ್ನ ಕೂಡಲಸಂಗಮ ಬಸವವಾಣಿ ಎಂದು ಟಾಂಗ್ ಕೊಟ್ಟಿದ್ದಾರೆ.
ಸದಾನಂದಗೌಡರು ಯಡಿಯೂರಪ್ಪ ಕುಟುಂಬದ ವಿರುದ್ಧ ಮಾತನಾಡಿರುವುದನ್ನು ನಾನು ಬಿಚ್ಚಿಡುತ್ತೇನೆ. ನನಗಿಂತ ಕೆಟ್ಟದಾಗಿ ಮಾತನಾಡಿದ್ದಾರೆ. ದೀಪ ಆರಿದವರ ಬಗ್ಗೆ ನಾನು ಮಾತನಾಡಲ್ಲ. ನಿಮ್ಮ ದೀಪ ಈಗಾಗಲೆ ಆರಿಹೋಗಿದೆ. ನಾನು ಯಾರು ಜೊತೆನೂ ಹೊಂದಾಣಿಕೆ ಮಾಡಿಕೊಂಡಿಲ್ಲ. ನನ್ನ ವಿರುದ್ಧ ಮಾತನಾಡಿದವರ ಬಣ್ಣ ಬಯಲು ಮಾಡುತ್ತೇನೆ. ನೀವು ಯಡಿಯೂರಪ್ಪ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದೀರಿ, ಇಲ್ಲ ಎನ್ನುವುದಾದರೆ ಧರ್ಮಸ್ಥಳಕ್ಕೆ ಬಂದು ಆಣೆಪ್ರಮಾಣ ಮಾಡಲಿ ಎಂದು ಆಣೆಪ್ರಮಾಣಕ್ಕೆ ಪಂಥಾಹ್ವಾನ ನೀಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…