Featured

ಬಾಯಿ ಮುಚ್ಚಿಕೊಂಡು ಇರಬೇಕು, ಇಲ್ಲದೆ ಹೋದರೆ ಬಂಡವಾಳ ಬಯಲು ಮಾಡುತ್ತೇನೆ :  ಡಿವಿಎಸ್ ವಿರುದ್ದ ಯತ್ನಾಳ್ ಕಿಡಿ – vishwanews24

ಬಾಯಿ ಮುಚ್ಚಿಕೊಂಡು ಇರಬೇಕು, ಇಲ್ಲದೆ ಹೋದರೆ ಬಂಡವಾಳ ಬಯಲು ಮಾಡುತ್ತೇನೆ :  ಡಿವಿಎಸ್ ವಿರುದ್ದ ಯತ್ನಾಳ್ ಕಿಡಿ

ವಿಜಯಪುರ: ಯಡಿಯೂರಪ್ಪ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದೀರಿ, ನಿಮ್ಮ ಬಣ್ಣ ಬಯಲು ಮಾಡ್ತೀನಿ, ಇಲ್ಲವಾದರೆ ಧರ್ಮಸ್ಥಳಕ್ಕೆ ಬಂದು ಆಣೆಪ್ರಮಾಣ ಮಾಡಲಿ ಎಂದು ಡಿವಿಎಸ್‌ಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಸವಾಲು ಎಸೆದಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದಾನಂದಗೌಡ ಬಾಯಿ ಮುಚ್ಚಿಕೊಂಡು ಇರಬೇಕು. ಇಲ್ಲದೆ ಹೋದರೆ ಬಂಡವಾಳ ಬಯಲು ಮಾಡುತ್ತೇನೆ. ನಾನು ವಕ್ಫ್ ವಿರುದ್ಧ ಮಾತನಾಡಿದ್ದೇನೆ. ಸದಾನಂದಗೌಡ ಯಾಕೆ ಗಾಬರಿಯಾಗಬೇಕು? ನೀವು ಗಾಬರಿಯಾಗಬೇಡಿ. ನಾಗರಹಾವು-ಎರೆಹುಳ ಎತ್ತನಿಂದೆತ್ತ ಸಂಬಂಧವಯ್ಯ ಸದಾನಂದ. ನೀನು ಮಾತನಾಡಿದ ಕೃತಿಗೂ ನಿನ್ನ ನಾಲಿಗೆಗೂ ಎತ್ತ ಸಂಬಂಧವಯ್ಯ ಸದಾನಂದ. ಇದು ನನ್ನ ಹೊಸ ವಚನ, ಇದು ನನ್ನ ಕೂಡಲಸಂಗಮ ಬಸವವಾಣಿ ಎಂದು ಟಾಂಗ್ ಕೊಟ್ಟಿದ್ದಾರೆ.

ಸದಾನಂದಗೌಡರು ಯಡಿಯೂರಪ್ಪ ಕುಟುಂಬದ ವಿರುದ್ಧ ಮಾತನಾಡಿರುವುದನ್ನು ನಾನು ಬಿಚ್ಚಿಡುತ್ತೇನೆ. ನನಗಿಂತ ಕೆಟ್ಟದಾಗಿ ಮಾತನಾಡಿದ್ದಾರೆ. ದೀಪ ಆರಿದವರ ಬಗ್ಗೆ ನಾನು ಮಾತನಾಡಲ್ಲ. ನಿಮ್ಮ ದೀಪ ಈಗಾಗಲೆ ಆರಿಹೋಗಿದೆ. ನಾನು ಯಾರು ಜೊತೆನೂ ಹೊಂದಾಣಿಕೆ ಮಾಡಿಕೊಂಡಿಲ್ಲ. ನನ್ನ ವಿರುದ್ಧ ಮಾತನಾಡಿದವರ ಬಣ್ಣ ಬಯಲು ಮಾಡುತ್ತೇನೆ. ನೀವು ಯಡಿಯೂರಪ್ಪ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದೀರಿ, ಇಲ್ಲ ಎನ್ನುವುದಾದರೆ ಧರ್ಮಸ್ಥಳಕ್ಕೆ ಬಂದು ಆಣೆಪ್ರಮಾಣ ಮಾಡಲಿ ಎಂದು ಆಣೆಪ್ರಮಾಣಕ್ಕೆ ಪಂಥಾಹ್ವಾನ ನೀಡಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

12 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago