Featured

ಮುಚ್ಚುವ ಭೀತಿ ಎದುರಿಸುತ್ತಿದ್ದ ಕನ್ನಡ ಶಾಲೆಯನ್ನು ದತ್ತು ಪಡೆದು ಮಾದರಿ ಶಾಲೆಯನ್ನಾಗಿ ರೂಪಿಸುವ ಕನಸು ಹೊತ್ತ ರಿಷಬ್ ಶೆಟ್ಟಿ ..

ಬೆಂಗಳೂರು : ಸಹಿಪ್ರಾ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ ಸಿನಿಮಾ ಚಿತ್ರೀಕರಣಗೊಂಡಿದ್ದು ಮಂಜೇಶ್ವರ ಮತ್ತು ಮಂಗಳೂರು ಮಧ್ಯ ಭಾಗದಲ್ಲಿರುವ ಕೈರಂಗಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ.ಈ ಕನ್ನಡ ಶಾಲೆ ಮುಚ್ಚುವ ಭೀತಿ ಎದುರಿಸುತ್ತಿತ್ತು.

ಇದೀಗ ಆ ಶಾಲೆಯನ್ನು ರಿಷಬ್ ಶೆಟ್ಟಿ ದತ್ತು ಪಡೆದುಕೊಂಡಿದ್ದಾರೆ. ಮಾದರಿ ಶಾಲೆಯನ್ನಾಗಿ ರೂಪಿಸುವ ಕನಸು ಹೊತ್ತಿದ್ದಾರೆ. ರಿಷಬ್ ಶೆಟ್ಟಿ ಚಿತ್ರದ ಚಿತ್ರೀಕರಣ ನಡೆಸುತ್ತಿದ್ದ ವೇಳೆಯಲ್ಲಿ 42 ಮಂದಿ ವಿದ್ಯಾರ್ಥಿಗಳಿದ್ದರು. ಆ ವರ್ಷ ಕೆಲವು ಮಂದಿ ಏಳನೇ ತರಗತಿ ಪಾಸಾಗಿ ಈಗ 25 ಮಂದಿ ವಿದ್ಯಾರ್ಥಿಗಳು ಉಳಿದುಕೊಂಡಿದ್ದರು. ವಿಪರ್ಯಾಸವೆಂದರೆ ಒಂದನೇ ತರಗತಿಗೆ ವಿದ್ಯಾರ್ಥಿಗಳನ್ನು ಅಡ್ಮಿಷನ್ ಮಾಡಿಕೊಳ್ಳುವುದನ್ನು ನಿಲ್ಲಿಸಲಾಗಿತ್ತು. ಬೇರೆ ದಾರಿಯೇ ಇಲ್ಲದೆ ಕೆಲವೇ ವರ್ಷಗಳಲ್ಲಿ ಈ ಶಾಲೆಯನ್ನು ಮುಚ್ಚಬೇಕಾಗುತ್ತಿತ್ತು. ಇಂಥಾ ಸಂದರ್ಭದಲ್ಲಿ ರಿಷಬ್ ಶೆಟ್ಟಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ.

ತನ್ನ ಪ್ರೀತಿಯ ಶಾಲೆಯನ್ನು ಉಳಿಸಿಕೊಳ್ಳುವ ಮನಸ್ಸು ಮಾಡಿದ್ದಾರೆ. ಕನ್ನಡ ಶಾಲೆ ಉಳಿಸಿ ಆಂದೋಲನದ ರೂವಾರಿ ಅನಿಲ್ ಶೆಟ್ಟಿಯವರ ಜೊತೆಗೂಡಿ ರಿಷಬ್ ಈ ಶಾಲೆಯನ್ನು ವಿಭಿನ್ನ ರೂಪಿಸಲಿದ್ದಾರೆ. ಕನ್ನಡ ಶಾಲೆ ಉಳಿಸಿ ಆಂದೋಲನದ ಕಾರ್ಯಕರ್ತರು ಈಗಾಗಲೇ ಎರಡು ಕನ್ನಡ ಶಾಲೆಗಳನ್ನು ದತ್ತು ಪಡೆದುಕೊಂಡಿದ್ದಾರೆ. ಮತ್ತೊಂದಷ್ಟು ಕನ್ನಡ ಶಾಲೆ ಉಳಿಸಲು ಪ್ರಯತ್ನ ಪಡುತ್ತಿದ್ದಾರೆ. ಈ ಹಂತದಲ್ಲಿ ರಿಷಬ್ ಅವರ ಜೊತೆಯಾಗಿ ಮಾದರಿ ಕೆಲಸ ಮಾಡಿದ್ದಾರೆ.

ಈ ಕುರಿತು  ರಿಷಬ್ ಶೆಟ್ಟಿ ಹೇಳಿದ ಮಾತುಗಳು :

ಮಕ್ಕಳಿಗೆ ಪ್ರಾಥಮಿಕ ಶಿಕ್ಷಣ ಕನ್ನಡದಲ್ಲೇ ಸಿಗಬೇಕು ಅನ್ನುವುದು ನನ್ನ ನಿಲುವು. ಅದಕ್ಕಾಗಿ ಕನ್ನಡ ಶಾಲೆ ಉಳಿಯಬೇಕು.
ಚಿತ್ರೀಕರಣ ನಡೆಸುತ್ತಿದ್ದಾಗ 42 ಮಂದಿ ಇದ್ದರು. ಅವರನ್ನು ಚಿತ್ರದ ಹಾಡಿನಲ್ಲಿ ತೋರಿಸಿದ್ದೇವೆ. ಈಗ ಮಕ್ಕಳ ಸಂಖ್ಯೆ ಕಡಿಮೆಯಾಗಿ ಶಾಲೆ ಮುಚ್ಚುವ ಸ್ಥಿತಿ ಇದೆ.
ನಾನು ಕನ್ನಡ ಶಾಲೆಯಲ್ಲಿ ಓದಿದವನು. ಅದರ ಜೊತೆಗೆ ಈ ಶಾಲೆ ನನ್ನ ಹೃದಯಕ್ಕೆ ತುಂಬಾ ಹತ್ತಿರವಾದ ಶಾಲೆ. ಹಾಗಾಗಿ ಈ ಶಾಲೆ ದತ್ತು ಪಡೆಯಲು ನಿರ್ಧರಿಸಿದ್ದೇನೆ.
ಮತ್ತೆ ಈ ಶಾಲೆಯನ್ನು ಹೊಸತಾಗಿ ರೂಪಿಸುವ ಆಲೋಚನೆ ಇದೆ. ಪ್ರೀ ಸ್ಕೂಲ್ ಆರಂಭಿಸಬೇಕು. ಮಕ್ಕಳನ್ನು ಶಾಲೆಗೆ ಕರೆತರಲು ವಾಹನ ವ್ಯವಸ್ಥೆ ಮಾಡಿಸಬೇಕು.

ಹೊಸ ಥರ ಪೇಂಟ್ ಮಾಡಿಸಿ ಕ್ರಿಯೇಟಿವ್ ಆಗಿ ರೂಪಿಸಬೇಕು.
ಇದೆಲ್ಲಾ ಒಬ್ಬನಿಂದ ಆಗುವ ಕೆಲಸ ಅಲ್ಲ. ಈ ಶಾಲೆಯಲ್ಲಿ ಓದಿದವರೆಲ್ಲಾ ಮುಂದೆ ಬಂದರೆ ಚೆಂದ. ಈ ಶಾಲೆಯನ್ನು ಮಾದರಿಯಾಗಿ ಮಾಡಿದರೆ ಬೇರೆ ಊರಲ್ಲಿ ಬೇರೆಯವರು ಈ ಥರದ ಪ್ರಯತ್ನ ಮಾಡುತ್ತಾರೆ ಅನ್ನುವ ಆಸೆ ನನ್ನದು.

ಅ.18 ರಂದು ನಮ್ಮ ಚಿತ್ರತಂಡ ಆ ಶಾಲೆಯಲ್ಲಿ ನಡೆಯುವ ಶಾರದೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದೆ.-ಅವತ್ತು ಆ ಶಾಲೆಯ ಮಕ್ಕಳ ಪೋಷಕರಲ್ಲಿ ನೆರವು ನೀಡಲು ಕೇಳಿಕೊಳ್ಳುತ್ತೇನೆ. ಕನ್ನಡ ಶಾಲೆ ಉಳಿಸುವುದು ನಮ್ಮೆಲ್ಲರ ಕರ್ತವ್ಯ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago