Featured

ಮುಜರಾಯಿ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ಕ್ಕೆ ಸಲ್ಲಿಸುವ ಸುಳ್ಳು ದಾಖಲೆಗಳ ಮೇಲೆ ಕಾನೂನು ಕ್ರಮ : ಕೋಟ ಶ್ರೀನಿವಾಸ ಪೂಜಾರಿ -Vishwanews24

ಮಂಗಳೂರು : ಎ ಗ್ರೇಡ್ ಮುಜರಾಯಿ ದೇವಾಲಯಗಳಲ್ಲಿ ಇಲಾಖೆಯಿಂದಲೇ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಲು ಅಗತ್ಯ ಸಿದ್ಧತೆ ಕೈಗೊಳ್ಳಲು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಪ್ರಮುಖ ದೇವಾಲಯಗಳಲ್ಲಿ ಸಾಮೂಹಿಕ ವಿವಾಹಗಳನ್ನು ನಡೆಸುವ ಸಭೆಯ ಸಂಬಂಧ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವರನಿಗೆ ಪ್ರೋತ್ಸಾಹ ಧನವಾಗಿ ರೂ. 5 ಸಾವಿರ, ವಧುವಿಗೆ ಪ್ರೋತ್ಸಾಹ ಧನವಾಗಿ ರೂ. 10 ಸಾವಿರ ಹಾಗೂ ವಧುವಿಗೆ ರೂ. 40 ಸಾವಿರ ಬೆಲೆ ಬಾಳುವ ಚಿನ್ನದ ತಾಳಿ, ಅಂದಾಜು 8 ಗ್ರಾಂ ತೂಕದ ಎರಡು ಚಿನ್ನದ ಗುಂಡು ನೀಡಲಾಗುತ್ತದೆ. ಇದನ್ನು ದೇವಾಲಯದ ನಿಧಿಯಿಂದ ಭರಿಸಲಾಗುವುದು ಎಂದು ಅವರು ಹೇಳಿದರು.

ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಆಡಳಿತಾಧಿಕಾರಿಗಳು, ಅನುವಂಶಿಕ ಮೊಕ್ತೇಸರರು, ಜಿಲ್ಲಾಧಿಕಾರಿಗಳು, ಜಿಲ್ಲಾಧಾರ್ಮಿಕ ಪರಿಷತ್ತಿನ ಅಧ್ಯಕ್ಷರ ಅನುಮತಿ ಪಡೆದು ಸಾಮೂಹಿಕ ವಿವಾಹಕ್ಕಾಗಿ 2020ರ ಏಪ್ರಿಲ್ 26 ಹಾಗೂ ಮೇ 24 ಇದರಲ್ಲಿ ಒಂದು ದಿನಾಂಕವನ್ನು ನಿಗದಿಪಡಿಸಬೇಕು ಎಂದು ಹೇಳಿದರು.

ಸಾಮೂಹಿಕ ವಿವಾಹದಲ್ಲಿ ಪಾಲ್ಗೊಳ್ಳುವವರು ದೇವಾಲಯದ ಕಚೇರಿಗಳಿಗೆ ಬಂದು ಅರ್ಜಿ ಪಡೆದು, ದಾಖಲೆಗಳನ್ನು ನೀಡಿ ವಿವಾಹ ನಡೆಯುವ ದಿನಾಂಕಕ್ಕೆ 30 ದಿನ ಮುಂಚಿತವಾಗಿ ನೋಂದಾಯಿಸಿಕೊಳ್ಳಬೇಕು. ವಿವಾಹ ನಡೆಯುವ ಸ್ಥಳದಲ್ಲಿ ವಿವಾಹ ನೋಂದಾಣಾಧಿಕಾರಿ ಮತ್ತು ಆಯಾಯ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದು, ಕಡ್ಡಾಯವಾಗಿ ವಿವಾಹ ನೋಂದಣಿ ಮಾಡಿಸುವ ಬಗ್ಗೆ ಅಗತ್ಯ ಕ್ರಮವಹಿಸಬೇಕು.

ಸಾಮೂಹಿಕ ವಿವಾಹಕ್ಕೆ ಸಲ್ಲಿಸುವ ದಾಖಲೆಗಳು ಸುಳ್ಳು ದಾಖಲೆಗಳೆಂದು ದೃಢಪಟ್ಟಲ್ಲಿ ಅಂತವಹರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ. ವಧು- ವರರಿಗೆ ಪ್ರೋತ್ಸಾಹ ಧನವಾಗಿ ನೀಡುವ ಮೊತ್ತವನ್ನು ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದರು.

ಜಿಲ್ಲಾಧಿಕಾರಿಗಳು ಈ ಕಾರ್ಯಕ್ರಮದ ಮೇಲುಸ್ತುವಾರಿಯನ್ನು ವಹಿಸಿಕೊಂಡು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.

ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ‘ಎ’ ಪ್ರವರ್ಗದ ಉತ್ತಮ ಆದಾಯ ಇರುವ ದೇವಾಲಯಗಳಲ್ಲಿ 20 ದೇವಾಲಯಗಳನ್ನು ಆಯ್ಕೆ ಮಾಡಿದ್ದು, ಡಿಸೆಂಬರ್ ಮೊದಲ ವಾರದಲ್ಲಿ ಇದರ ಬಗ್ಗೆ ಸಂಪೂರ್ಣ ಮಾಹಿತಿ ದೊರೆಯಲಿದೆ ಎಂದು ಹೇಳಿದರು.

ಸಭೆಯಲ್ಲಿ ಶಾಸಕರಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ಸಂಜೀವ ಮಠಂದೂರು, ಡಾ. ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ರೂಪಾ ಉಪಸ್ಥಿತರಿದ್ದರು.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

9 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

9 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

9 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

9 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

12 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

12 hours ago