ಬೆಂಗಳೂರು: ಮುಡಾದಲ್ಲಿ ನನ್ನ ಪತ್ನಿಗೆ ಇಡಿ ಕೊಟ್ಟಿರುವ ನೋಟಿಸ್ ರಾಜಕೀಯ ಪ್ರೇರಿತ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಕೇಸ್‌ನಲ್ಲಿ ನನ್ನ ಪತ್ನಿಗೆ ಇಡಿಯವರು ನೋಟಿಸ್ ಕೊಟ್ಟಿದ್ದರು. ಅದಕ್ಕೆ ಹೈಕೋರ್ಟ್ ತಡೆ ನೀಡಿದೆ. ಯಾಕೆ ಇಷ್ಟು ಆತುರ ಮಾಡ್ತಿದ್ದೀರಾ? ತನಿಖೆ ನಡೆಯುತ್ತಿದೆ. ಸಿಬಿಐಗೆ ಕೊಡಬೇಕಾ? ಬೇಡವಾ? ಎನ್ನುವ ಬಗ್ಗೆ ಚರ್ಚೆ ಆಗ್ತಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಹೀಗಾಗಿ ಬಗ್ಗೆ ಆದೇಶ ಕಾಯ್ದಿರಿಸಿದೆ. ಈ ಹಂತದಲ್ಲಿ ನೀವು ಆತುರ ಮಾಡುವುದು ಸರಿಯಲ್ಲ ಎಂದು ಕೋರ್ಟ್ ಹೇಳಿದೆ. ಹೀಗಾಗಿ ಕೋರ್ಟ್ ತಡೆ ಕೊಟ್ಟಿದೆ ಎಂದರು.
ಇಡಿ ನೋಟಿಸ್ ರಾಜಕೀಯ ಪ್ರೇರಿತನಾ ಎಂಬ ಪ್ರಶ್ನೆಗೆ ಉತ್ತರಿದ ಅವರು, ಇಡಿ ನೋಟಿಸ್ ರಾಜಕೀಯ ಪ್ರೇರಿತವಲ್ಲದೇ ಇನ್ನೇನು? ಮುಡಾ ಪ್ರಕರಣವೇ ರಾಜಕೀಯ ಪ್ರೇರಿತ ಎಂದು ಕಿಡಿಕಾರಿದರು.
ಇನ್ನೂ ಮುಡಾ ಕೇಸ್ ಸಿಬಿಐಗೆ ತನಿಖೆ ಕೊಡುವ ಬಗ್ಗೆ ಆತಂಕ ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನ್ಯಾಯಾಧೀಶರು ಏನು ಮಾಡುತ್ತಾರೆ ಎಂದು ಗೊತ್ತಿಲ್ಲ. ನ್ಯಾಯಾಧೀಶರು ಆದೇಶವನ್ನು ಕಾಯ್ದಿರಿಸಿದ್ದಾರೆ. ನನಗೆ ಯಾಕೆ ಆತಂಕ ಆಗುತ್ತದೆ. ನನಗೆ ನ್ಯಾಯಾಲಯದಲ್ಲಿ ನ್ಯಾಯ ಸಿಗುತ್ತೆ ಎಂದು ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…
ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…