Featured

ಮುಡಾ ಕೇಸ್‌ : ನನ್ನ ಪತ್ನಿಗೆ ಇಡಿ ಕೊಟ್ಟಿರುವ ನೋಟಿಸ್ ರಾಜಕೀಯ ಪ್ರೇರಿತ : ಸಿಎಂ ಸಿದ್ದರಾಮಯ್ಯ – vishwanews24

ಮುಡಾ ಕೇಸ್‌ : ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾದಲ್ಲಿ ನನ್ನ ಪತ್ನಿಗೆ ಇಡಿ ಕೊಟ್ಟಿರುವ ನೋಟಿಸ್ ರಾಜಕೀಯ ಪ್ರೇರಿತ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಕೇಸ್‌ನಲ್ಲಿ ನನ್ನ ಪತ್ನಿಗೆ ಇಡಿಯವರು ನೋಟಿಸ್ ಕೊಟ್ಟಿದ್ದರು. ಅದಕ್ಕೆ ಹೈಕೋರ್ಟ್ ತಡೆ ನೀಡಿದೆ. ಯಾಕೆ ಇಷ್ಟು ಆತುರ ಮಾಡ್ತಿದ್ದೀರಾ? ತನಿಖೆ ನಡೆಯುತ್ತಿದೆ. ಸಿಬಿಐಗೆ ಕೊಡಬೇಕಾ? ಬೇಡವಾ? ಎನ್ನುವ ಬಗ್ಗೆ ಚರ್ಚೆ ಆಗ್ತಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಹೀಗಾಗಿ ಬಗ್ಗೆ ಆದೇಶ ಕಾಯ್ದಿರಿಸಿದೆ. ಈ ಹಂತದಲ್ಲಿ ನೀವು ಆತುರ ಮಾಡುವುದು ಸರಿಯಲ್ಲ ಎಂದು ಕೋರ್ಟ್ ಹೇಳಿದೆ. ಹೀಗಾಗಿ ಕೋರ್ಟ್ ತಡೆ ಕೊಟ್ಟಿದೆ ಎಂದರು.

ಇಡಿ ನೋಟಿಸ್ ರಾಜಕೀಯ ಪ್ರೇರಿತನಾ ಎಂಬ ಪ್ರಶ್ನೆಗೆ ಉತ್ತರಿದ ಅವರು, ಇಡಿ ನೋಟಿಸ್ ರಾಜಕೀಯ ಪ್ರೇರಿತವಲ್ಲದೇ ಇನ್ನೇನು? ಮುಡಾ ಪ್ರಕರಣವೇ ರಾಜಕೀಯ ಪ್ರೇರಿತ ಎಂದು ಕಿಡಿಕಾರಿದರು.

ಇನ್ನೂ ಮುಡಾ ಕೇಸ್ ಸಿಬಿಐಗೆ ತನಿಖೆ ಕೊಡುವ ಬಗ್ಗೆ ಆತಂಕ ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನ್ಯಾಯಾಧೀಶರು ಏನು ಮಾಡುತ್ತಾರೆ ಎಂದು ಗೊತ್ತಿಲ್ಲ. ನ್ಯಾಯಾಧೀಶರು ಆದೇಶವನ್ನು ಕಾಯ್ದಿರಿಸಿದ್ದಾರೆ. ನನಗೆ ಯಾಕೆ ಆತಂಕ ಆಗುತ್ತದೆ. ನನಗೆ ನ್ಯಾಯಾಲಯದಲ್ಲಿ ನ್ಯಾಯ ಸಿಗುತ್ತೆ ಎಂದು ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Vishwa News 24

Recent Posts

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

34 minutes ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

47 minutes ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

52 minutes ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

1 hour ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

2 hours ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago