ಬೆಂಗಳೂರು: ಮುಡಾ ಪ್ರಕರಣದ ಬಗ್ಗೆ ನಾನು ಆರಂಭದಲ್ಲೇ ಹೇಳಿದ್ದೆ. ಬಿಜೆಪಿ-ಜೆಡಿಎಸ್‌ನವರು ಪಾದಯಾತ್ರೆ ಮಾಡಿದಾಗಲೇ ಇದೊಂದು ರಾಜಕೀಯ ಪ್ರೇರಿತ ಅಂತಾ ಹೇಳಿದ್ದೆ. ಆದರೀಗ ಲೋಕಾಯುಕ್ತರೇ ಈ ಕೇಸ್‌ನಲ್ಲಿ ಯಾವುದೇ ಸಾಕ್ಷ್ಯ ಇಲ್ಲ ಎಂದಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ತಿಳಿಸಿದರು.
ಮುಡಾ ಕೇಸಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರಿಗೆ ಕ್ಲೀನ್ ಚಿಟ್ ನೀಡಿರುವ ವಿಚಾರ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು, ಇದು ಸಿದ್ದರಾಮಯ್ಯಗೆ ಸಂಬಂಧವಿಲ್ಲದ್ದು. ಅವರದ್ದು ಅವರು ಕ್ಲೇಮ್ ಮಾಡಿದ್ದಾರೆ.ಇಂಥದ್ದೇ ಜಾಗ ಕೊಡಿ ಎಂದು ಕೇಳಿಲ್ಲ. ಇದು ರಾಜಕೀಯ, ಅಧಿಕಾರ ಪ್ರಭಾವ ಬಳಸಿ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಆದರೆ ಕೇಸ್‌ನಲ್ಲಿ ಯಾವುದೇ ಎವಿಡೆನ್ಸ್ ಇಲ್ಲ ಎಂದು ಲೋಕಾಯುಕ್ತ ಅಧಿಕಾರಿಗಳು ತನಿಖೆ ಮಾಡಿದ್ದಾರೆ ಎಂದರು.
ಹೈಕೋರ್ಟ್ ಕೂಡ ಇದೊಂದು ರಾಜಕೀಯ ಪ್ರೇರಿತ ಎಂದು ಈಗಾಗಲೇ ಹೇಳಿದೆ. ಇಂಡಿಪೆಂಡಂಟ್ ಬಾಡಿ ಎಂದು ಹೈಕೋರ್ಟ್ ತಿಳಿಸಿದೆ. ಪ್ರತಿಯೊಬ್ಬ ಅಧಿಕಾರಿಗಳು ಸಿಎಂ ಹೇಳಿದಂತೆ ಕೇಳ್ತಾರಾ? ಲೋಕಾಯುಕ್ತ ಸ್ವತಂತ್ರ ಸಂಸ್ಥೆ, ಇದರಲ್ಲಿ ಯಾವುದೇ ಪ್ರಭಾವ ಇಲ್ಲ ಎಂದರು. ಇದೇ ವೇಳೆ ವಿಜಯೇಂದ್ರ ವಿಚಾರ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ವಿಜಯೇಂದ್ರನ ವಿಚಾರ, ಇರಿಗೇಶನ್ ವಿಚಾರ ಆಮೇಲೆ ಮಾತನಾಡುತ್ತೇನೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…