ಮೈಸೂರು/ಧಾರವಾಡ: ನಮ್ಮ ಹೋರಾಟಕ್ಕೆ ಒಂದು ಹಿನ್ನಡೆಯಾಗಿದೆ, ಇದಕ್ಕಾಗಿ ಹೋರಾಟದಿಂದ ಹಿಂದೆ ಸರಿಯಲ್ಲ. ಸುಪ್ರೀಂ ಕೋರ್ಟ್‌ಗೆ ಹೋಗ್ತೀನಿ ಎಂದು ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಧಾರವಾಡ ಹೈಕೋರ್ಟ್ ನಿರಾಕರಿಸಿದ್ದರ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದ್ದಾರೆ. ಮಾತನಾಡಿದ ಅವರು, ನಮ್ಮ ಹೋರಾಟಕ್ಕೆ ಒಂದು ಹಿನ್ನಡೆಯಾಗಿದೆ. ಆದ್ರೆ ಇದಕ್ಕಾಗಿ ಹೋರಾಟದಿಂದ ಹಿಂದೆ ಸರಿಯಲ್ಲ. ಸುಪ್ರೀಂ ಕೋರ್ಟ್‌ಗೆ ಹೋಗ್ತೀನಿ ಎಂದು ಹೇಳಿದ್ದಾರೆ.
ನ್ಯಾಯಾಲಯ ಯಾವ ವಿಚಾರವನ್ನಿಟ್ಟುಕೊಂಡು ಸಿಬಿಐ ತನಿಖೆಗೆ ಕೊಡಲು ನಿರಾಕರಿಸಿದೆ ಗೊತ್ತಿಲ್ಲ. ಆ ಅಂಶಗಳನ್ನು ನೋಡಿ ನಮ್ಮ ವಕೀಲರ ಜೊತೆ ಮಾತಾಡುತ್ತೇನೆ. ಬಳಿಕ ನಾವು ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ. ಲೋಕಾಯುಕ್ತ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಸಿದ್ದರಾಮಯ್ಯ ಅವರು ಹೇಳಿದಂತೆ ತನಿಖೆ ನಡೆಯುತ್ತಿದೆ ಎಂಬ ಅನುಮಾನ ಇತ್ತು. ಅದಕ್ಕಾಗಿ ನಾವು ಸಿಬಿಐಗೆ ಹೋಗಬೇಕೆಂದು ಹೋರಾಟ ಮಾಡ್ತೀವಿ. ಮುಂದಿನ ವಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಈ ಪ್ರಕರಣವನ್ನ ಸಿಬಿಐಗೆ ನೀಡುವಂತೆ ಹೋರಾಟ ಮಾಡ್ತೀವಿ ಎಂದು ತಿಳಿಸಿದ್ದಾರೆ.
ಯುದ್ಧದಲ್ಲಿ ಸೋಲು ಗೆಲುವು ಸಹಜ. ಇದುವರೆಗೆ ನಾವು ಗೆದ್ದಿದ್ದೆವು, ಈಗ ಸಣ್ಣ ಹಿನ್ನಡೆಯಾಗಿದೆ ಅಷ್ಟೇ. ಇದರಿಂದ ನಾನು ವ್ಯತಿರಿಕ್ತವಾಗುವುದಿಲ್ಲ. ಈಗಲೂ ನನಗೆ ಲೋಕಾಯುಕ್ತದ ತನಿಖೆ ಮೇಲೆ ನಂಬಿಕೆ ಇಲ್ಲ. ಸುಪ್ರೀಂ ಕೋರ್ಟ್ ಮುಡಾ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸುತ್ತದೆ ಎಂಬ ನಂಬಿಕೆಯಿದೆ ಎಂದು ನುಡಿದಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…