Featured

ಮುಡಾ ಪ್ರಕರಣ : ನಮ್ಮ ಹೋರಾಟಕ್ಕೆ ಹಿನ್ನಡೆಯಾಗಿದೆ , ಸುಪ್ರೀಂ ಕೋರ್ಟ್‌ಗೆ ಹೋಗ್ತೀನಿ : ಸ್ನೇಹಮಯಿ ಕೃಷ್ಣ – vishwanews24

ಮುಡಾ ಪ್ರಕರಣ : ನಮ್ಮ ಹೋರಾಟಕ್ಕೆ ಒಂದು ಹಿನ್ನಡೆಯಾಗಿದೆ , ಸುಪ್ರೀಂ ಕೋರ್ಟ್‌ಗೆ ಹೋಗ್ತೀನಿ : ಸ್ನೇಹಮಯಿ ಕೃಷ್ಣ

ಮೈಸೂರು/ಧಾರವಾಡ: ನಮ್ಮ ಹೋರಾಟಕ್ಕೆ ಒಂದು ಹಿನ್ನಡೆಯಾಗಿದೆ, ಇದಕ್ಕಾಗಿ ಹೋರಾಟದಿಂದ ಹಿಂದೆ ಸರಿಯಲ್ಲ. ಸುಪ್ರೀಂ ಕೋರ್ಟ್‌ಗೆ ಹೋಗ್ತೀನಿ ಎಂದು ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಧಾರವಾಡ ಹೈಕೋರ್ಟ್‌  ನಿರಾಕರಿಸಿದ್ದರ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದ್ದಾರೆ. ಮಾತನಾಡಿದ ಅವರು, ನಮ್ಮ ಹೋರಾಟಕ್ಕೆ ಒಂದು ಹಿನ್ನಡೆಯಾಗಿದೆ. ಆದ್ರೆ ಇದಕ್ಕಾಗಿ ಹೋರಾಟದಿಂದ ಹಿಂದೆ ಸರಿಯಲ್ಲ. ಸುಪ್ರೀಂ ಕೋರ್ಟ್‌ಗೆ ಹೋಗ್ತೀನಿ ಎಂದು ಹೇಳಿದ್ದಾರೆ.

ನ್ಯಾಯಾಲಯ ಯಾವ ವಿಚಾರವನ್ನಿಟ್ಟುಕೊಂಡು ಸಿಬಿಐ ತನಿಖೆಗೆ ಕೊಡಲು ನಿರಾಕರಿಸಿದೆ ಗೊತ್ತಿಲ್ಲ. ಆ ಅಂಶಗಳನ್ನು ನೋಡಿ ನಮ್ಮ ವಕೀಲರ ಜೊತೆ ಮಾತಾಡುತ್ತೇನೆ. ಬಳಿಕ ನಾವು ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ. ಲೋಕಾಯುಕ್ತ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಸಿದ್ದರಾಮಯ್ಯ ಅವರು ಹೇಳಿದಂತೆ ತನಿಖೆ ನಡೆಯುತ್ತಿದೆ ಎಂಬ ಅನುಮಾನ ಇತ್ತು. ಅದಕ್ಕಾಗಿ ನಾವು ಸಿಬಿಐಗೆ ಹೋಗಬೇಕೆಂದು ಹೋರಾಟ ಮಾಡ್ತೀವಿ. ಮುಂದಿನ ವಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಈ ಪ್ರಕರಣವನ್ನ ಸಿಬಿಐಗೆ ನೀಡುವಂತೆ ಹೋರಾಟ ಮಾಡ್ತೀವಿ ಎಂದು ತಿಳಿಸಿದ್ದಾರೆ.

ಯುದ್ಧದಲ್ಲಿ ಸೋಲು ಗೆಲುವು ಸಹಜ. ಇದುವರೆಗೆ ನಾವು ಗೆದ್ದಿದ್ದೆವು, ಈಗ ಸಣ್ಣ ಹಿನ್ನಡೆಯಾಗಿದೆ ಅಷ್ಟೇ. ಇದರಿಂದ ನಾನು ವ್ಯತಿರಿಕ್ತವಾಗುವುದಿಲ್ಲ. ಈಗಲೂ ನನಗೆ ಲೋಕಾಯುಕ್ತದ ತನಿಖೆ ಮೇಲೆ ನಂಬಿಕೆ ಇಲ್ಲ. ಸುಪ್ರೀಂ ಕೋರ್ಟ್‌ ಮುಡಾ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸುತ್ತದೆ ಎಂಬ ನಂಬಿಕೆಯಿದೆ ಎಂದು ನುಡಿದಿದ್ದಾರೆ.

 

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

2 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

2 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

3 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

5 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

5 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 day ago