Featured

ಮುಡಾ ಪ್ರಕರಣ : ಪತ್ನಿ ವಿರುದ್ಧ ಅಪಪ್ರಚಾರ ಮಾಡಿದ ವಿಪಕ್ಷಗಳು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು: ಸಿಎಂ – vishwanews24

ಮುಡಾ ಪ್ರಕರಣ : ಪತ್ನಿ ವಿರುದ್ಧ ಅಪಪ್ರಚಾರ ಮಾಡಿದ ವಿಪಕ್ಷಗಳು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು: ಸಿಎಂ

ಬೆಂಗಳೂರು: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿಯವರಿಗೆ  ಬಿಗ್ ರಿಲೀಫ್ ಸಿಕ್ಕಿದೆ. ಇ.ಡಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು, ಸಿಎಂ ಪತ್ನಿ ವಿರುದ್ಧದ ಮುಡಾ ಪ್ರಕರಣದ ವಿಚಾರಣೆ ರದ್ದಾಗಿದೆ. ಸುಪ್ರೀಂ ಆದೇಶದ ಬೆನ್ನಲ್ಲೇ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಪತ್ನಿ ವಿರುದ್ಧ ಅಪಪ್ರಚಾರ ಮಾಡಿದ ವಿಪಕ್ಷಗಳು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದಾರೆ.

ಎಕ್ಸ್‌ನಲ್ಲಿ ಏನಿದೆ?
ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇ.ಡಿ. ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿ ನೀಡಿರುವ ಐತಿಹಾಸಿಕ ಆದೇಶ ಕೇಂದ್ರ ಸರ್ಕಾರದ ಕಪಾಳಕ್ಕೆ ನ್ಯಾಯದಂಡ ಬಾರಿಸಿರುವ ತಪರಾಕಿಯಾಗಿದೆ.

ಸುಪ್ರೀಂಕೋರ್ಟ್ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ.ವಿನೋದಚಂದ್ರ ಅವರ ಆದೇಶವನ್ನು ನಾನು ವಿನೀತನಾಗಿ ಸ್ವಾಗತಿಸುತ್ತೇನೆ. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ನಾನು ಸದಾ ಸಂವಿಧಾನ ಮತ್ತು ನೆಲದ ಕಾನೂನಿಗೆ ತಲೆಬಾಗುತ್ತಾ ಬಂದವನು. ಈ ನಂಬಿಕೆಯನ್ನು ಸುಪ್ರೀಂ ಕೋರ್ಟ್ ಆದೇಶ ಉಳಿಸಿಕೊಂಡು ಕಾಪಾಡಿದೆ.

ರಾಜಕೀಯವಾಗಿ ನನ್ನನ್ನು ಎದುರಿಸಲಾಗದ ಭಾರತೀಯ ಜನತಾ ಪಕ್ಷ ಮತ್ತು ಅದರ ಸಂಗಾತಿಗಳು ಸಾಂವಿಧಾನಿಕ ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಇಡಿಯನ್ನು ದುರ್ಬಳಕೆ ಮಾಡಿಕೊಂಡು ನನ್ನ ಪತ್ನಿಯ ವಿರುದ್ಧ ಸುಳ್ಳು ಪ್ರಕರಣವನ್ನು ಸೃಷ್ಟಿಸಿ, ನೀಡಿರುವ ಕಿರುಕುಳ ಅತ್ಯಂತ ಹೇಯವಾದುದು. ಇದರಿಂದ ನಾನು ಮತ್ತು ನನ್ನ ಕುಟುಂಬ ಅನುಭವಿಸಿದ ಮಾನಸಿಕವಾದ ಕಿರುಕುಳವನ್ನು ನಾನೆಂದೂ ಮರೆಯಲಾರೆ.

ನನ್ನ ಮನದಾಳದ ಮಾತನ್ನೇ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿಗಳಾದ ಗವಾಯಿ ಅವರು ಹೇಳಿದ್ದಾರೆ. ‘ರಾಜಕೀಯ ಸಮರಕ್ಕೆ ಮತದಾರರನ್ನು ಬಳಸಕೊಳ್ಳಬೇಕೇ ಹೊರತು, ಇದಕ್ಕಾಗಿ ಜಾರಿ ನಿರ್ದೇಶನಾಲಯದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಬಾರದು’ ಎಂಬ ಅವರ ಮಾತುಗಳು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜ್ಞಾವಂತ ಭಾರತೀಯನ ಅಭಿಪ್ರಾಯವಾಗಿದೆ.

ಕಳೆದ 10-11 ವರ್ಷಗಳಿಂದ ಕೇಂದ್ರ ಸರ್ಕಾರ ಮತ್ತು ಬಿಜೆಪಿಯು ಐಟಿ, ಸಿಬಿಐ ಮತ್ತು ಇಡಿಯ ದುರ್ಬಳಕೆ ಮೂಲಕ ಸಾಧಿಸುತ್ತಿರುವ ರಾಜಕೀಯ ದ್ವೇಷಕ್ಕೆ ಬಲಿಯಾದವರೆಲ್ಲರಲ್ಲಿಯೂ ಈ ತೀರ್ಪು ಸಮಾಧಾನ ಉಂಟುಮಾಡಿದೆ ಮತ್ತು ನ್ಯಾಯ ವ್ಯವಸ್ಥೆಯ ಮೇಲೆ ಭರವಸೆ ಮೂಡಿಸಿದೆ.

ಸುಪ್ರೀಂಕೋರ್ಟ್‌ನ ಈ ಕಣ್ಣುತೆರೆಸುವ ಆದೇಶದ ನಂತರವಾದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರು ಎಚ್ಚೆತ್ತುಕೊಂಡು ಐಟಿ, ಸಿಬಿಐ ಮತ್ತು ಇ.ಡಿ.ಯಂತಹ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆಯನ್ನು ನಿಲ್ಲಿಸಿ ಅವುಗಳಿಗೆ ಇರಬೇಕಾಗಿರುವ ಸ್ವಾಯತ್ತತೆಯನ್ನು ಕೊಟ್ಟು ತಮ್ಮ ಪಾಪ ತೊಳೆದುಕೊಳ್ಳಬೇಕು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಕಪೋಲಕಲ್ಪಿತ ಆರೋಪಗಳನ್ನು ಮಾಡುತ್ತಾ ಬಂದಿರುವ ರಾಜ್ಯದ ಬಿಜೆಪಿ ಮತ್ತು ಜೆಡಿಎಸ್ ನಾಯಕರಲ್ಲಿ ಕಿಂಚಿತ್ತಾದರೂ ಮಾನ-ಮರ್ಯಾದೆ ಎನ್ನುವುದು ಉಳಿದುಕೊಂಡಿದ್ದರೆ ಅವರೆಲ್ಲರೂ ತಕ್ಷಣ ತಮ್ಮ ತಪ್ಪಿಗಾಗಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago