ಮುಡಾ ಪ್ರಕರಣ :ಮುಖ್ಯಮಂತ್ರಿ ರಾಜೀನಾಮೆಗೆ ಅಗ್ರಹಿಸಿ ಉಡುಪಿಯಲ್ಲಿ ಇಂದು ಬಿಜೆಪಿ ಬೃಹತ್ ಪ್ರತಿಭಟನೆ – vishwanews24
ಮುಡಾ ಪ್ರಕರಣ :ಮುಖ್ಯಮಂತ್ರಿ ರಾಜೀನಾಮೆಗೆ ಅಗ್ರಹಿಸಿ ಉಡುಪಿಯಲ್ಲಿ ಇಂದು ಬಿಜೆಪಿ ಬೃಹತ್ ಪ್ರತಿಭಟನೆ
ಉಡುಪಿ: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಅಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವ ದಲ್ಲಿ ಆ. 19ರಂದು ಮಧ್ಯಾಹ್ನ 3.30ಕ್ಕೆ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಅವರು ತಿಳಿಸಿದ್ದಾರೆ
