ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳು ಇರದ್ದಕ್ಕೆ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟಿದೆ. ಲೋಕಾಯುಕ್ತ ತನಿಖೆಯನ್ನು ಬಿಜೆಪಿ ಪ್ರಶ್ನೆ ಮಾಡುವುದು ಸರಿನಾ ಎಂದು ಗೃಹ ಸಚಿವ ಪರಮೇಶ್ವರ್ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ.
ಮುಡಾ ಪ್ರಕರಣವನ್ನು ಸಿಬಿಐಗೆ ಕೊಡಬೇಕು ಎಂಬ ಬಿಜೆಪಿ ಆಗ್ರಹಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿಬಿಐಗೆ ಕೊಡುವ ವಿಚಾರದಲ್ಲಿ ಹೈಕೋರ್ಟ್ ಆದೇಶ ಮಾಡಿದೆ. ಸಿಬಿಐಗೆ ಕೊಡೋ ಅಗತ್ಯ ಇಲ್ಲ. ಲೋಕಾಯುಕ್ತ ತನಿಖೆ ನಡೆಸುತ್ತಿದೆ. ಎರಡು ಏಜೆನ್ಸಿಗಳು ಒಂದೇ ವಿಷಯದಲ್ಲಿ ತನಿಖೆ ಮಾಡೋದು ಕಾನೂನಿಗೆ ವಿರುದ್ದ ಅಂತ ಹೇಳಿದ್ದಾರೆ. ಲೋಕಾಯುಕ್ತದವರು ಕ್ಲೀನ್ ಚಿಟ್ ಕೊಟ್ಟಿದ್ದಾರೆ ಅಂದರೆ ಲೋಕಾಯುಕ್ತ ತನಿಖೆಯಲ್ಲಿ ಬಿಜೆಪಿ ಪ್ರಶ್ನೆ ಮಾಡ್ತಿದೆಯಾ ಅಂತ ಪ್ರಶ್ನೆ ಮಾಡಿದರು.
ಲೋಕಾಯುಕ್ತಗೆ ಸಿಕ್ಕ ಸಾಕ್ಷಿ ಆಧಾರದ ಮೇಲೆ ಅವರು ತೀರ್ಮಾನ ಮಾಡಿದ್ದಾರೆ .ಸಾಕ್ಷಿ, ಪುರಾವೆ ಇಲ್ಲ ಅಂದಾಗ ಅವರು ಒಂದು ತೀರ್ಮಾನ ಕೊಟ್ಟಿದ್ದಾರೆ. ಅದನ್ನ ಬಿಜೆಪಿ ಪ್ರಶ್ನೆ ಮಾಡೋದು ಎಷ್ಟು ಸರಿ? ಬಿಜೆಪಿ ಅವರಿಗೆ ಅನುಕೂಲ ಆದಾಗ ಎಲ್ಲವೂ ಸರಿ ಇರುತ್ತದೆ. ಇವರಿಗೆ ವಿರುದ್ಧವಾಗಿ ಬಂದರೆ ವಿಚಾರ ಸರಿ ಇರೋದಿಲ್ಲವಾ? ಇದು ಎಂತಹ ರಾಜಕೀಯ ಅಂತ ನನಗೆ ಗೊತ್ತಿಲ್ಲ ಅಂತ ಬಿಜೆಪಿ ಮೇಲೆ ಕಿಡಿಕಾರಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…