ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಸಿಬಿಐ ತನಿಖೆ ಕುಣಿಕೆಯಿಂದ ಸಿಎಂ ಸಿದ್ದರಾಮಯ್ಯ ಪಾರಾಗಿದ್ದಾರೆ. ಮುಡಾ ಕೇಸನ್ನು ಸಿಬಿಐ ತನಿಖೆಗೆ ವಹಿಸಲು ಧಾರವಾಡ ಹೈಕೋರ್ಟ್ ನಿರಾಕರಿಸಿದೆ.
ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಶುಕ್ರವಾರ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ವಜಾ ಮಾಡಿದೆ. ಸ್ನೇಹಮಯಿ ಕೃಷ್ಣ ಪರ ಮಣಿಂದರಸಿಂಗ್ ವಾದ ಮಂಡಿಸಿದ್ದರು.
ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆ ಅಲ್ಲ ಎಂದು ಹೇಳಲು ಆಗಲ್ಲ. ಲೋಕಾಯುಕ್ತ ಪೊಲೀಸ್ ತನಿಖೆಯಲ್ಲಿ ತಾರತಮ್ಯ ಇದೆ ಎಂದು ಹೇಳಲು ಆಧಾರ ಇಲ್ಲ. ಅದೊಂದು ಸ್ವತಂತ್ರ ತನಿಖಾ ಸಂಸ್ಥೆ. ಲೋಕಾ ತನಿಖೆ ಅಸಮರ್ಪಕ ಅಲ್ಲ ಎಂದು ಹೇಳಲು ಆಗಲ್ಲ. ಹೀಗಾಗಿ, ಸಿಬಿಐಗೆ ಇದನ್ನ ಕೊಡಲು ಹೈಕೋರ್ಟ್ ನಕಾರ ವ್ಯಕ್ತಪಡಿಸಿದೆ.
ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತ ತನಿಖೆ ಪಕ್ಷಾತೀತ, ನಿಷ್ಪಕ್ಷಪಾತ ಅಥವಾ ಸಿಬಿಐ ತನಿಖೆಗೆ ನಿರ್ದೇಶಿಸಲು ಕಳಪೆಯಾಗಿದೆ ಎಂದು ದಾಖಲೆಯಲ್ಲಿರುವ ವಸ್ತು ವಿಷಯ ಸೂಚಿಸುವುದಿಲ್ಲ. ಪರಿಣಾಮವಾಗಿ ಸಿಬಿಐ ತನಿಖೆಯ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಏಕಸದಸ್ಯ ಪೀಠದ ನ್ಯಾಯಾಧೀಶರು ಸ್ಪಷ್ಟಪಡಿಸಿದ್ದಾರೆ.
ಉಡುಪಿ : ಯುವತಿ ನಾಪತ್ತೆ ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತೀಕ್ಷಾ (18) ಎನ್ನುವ ಯುವತಿಯು ಆಗಸ್ಟ್…
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…