Featured

ಮುಡಾ  ಪ್ರಕರಣ : ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌ – CBI ತನಿಖೆಗೆ ಹೈಕೋರ್ಟ್‌ ನಕಾರ – vishwanews24

ಮುಡಾ  ಪ್ರಕರಣ : ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌ – CBI ತನಿಖೆಗೆ ಹೈಕೋರ್ಟ್‌ ನಕಾರ

ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಸಿಬಿಐ ತನಿಖೆ ಕುಣಿಕೆಯಿಂದ ಸಿಎಂ ಸಿದ್ದರಾಮಯ್ಯ  ಪಾರಾಗಿದ್ದಾರೆ. ಮುಡಾ ಕೇಸನ್ನು ಸಿಬಿಐ ತನಿಖೆಗೆ ವಹಿಸಲು ಧಾರವಾಡ ಹೈಕೋರ್ಟ್‌ ನಿರಾಕರಿಸಿದೆ.

ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಶುಕ್ರವಾರ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ವಜಾ ಮಾಡಿದೆ. ಸ್ನೇಹಮಯಿ ಕೃಷ್ಣ ಪರ ಮಣಿಂದರಸಿಂಗ್ ವಾದ ಮಂಡಿಸಿದ್ದರು.

ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆ ಅಲ್ಲ ಎಂದು ಹೇಳಲು ಆಗಲ್ಲ. ಲೋಕಾಯುಕ್ತ ಪೊಲೀಸ್ ತನಿಖೆಯಲ್ಲಿ ತಾರತಮ್ಯ ಇದೆ‌ ಎಂದು ಹೇಳಲು ಆಧಾರ ಇಲ್ಲ. ಅದೊಂದು ಸ್ವತಂತ್ರ ತನಿಖಾ ಸಂಸ್ಥೆ. ಲೋಕಾ ತನಿಖೆ ಅಸಮರ್ಪಕ ಅಲ್ಲ ಎಂದು ಹೇಳಲು ಆಗಲ್ಲ. ಹೀಗಾಗಿ, ಸಿಬಿಐಗೆ ಇದನ್ನ ಕೊಡಲು ಹೈಕೋರ್ಟ್‌ ನಕಾರ ವ್ಯಕ್ತಪಡಿಸಿದೆ.

ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತ ತನಿಖೆ ಪಕ್ಷಾತೀತ, ನಿಷ್ಪಕ್ಷಪಾತ ಅಥವಾ ಸಿಬಿಐ ತನಿಖೆಗೆ ನಿರ್ದೇಶಿಸಲು ಕಳಪೆಯಾಗಿದೆ ಎಂದು ದಾಖಲೆಯಲ್ಲಿರುವ ವಸ್ತು ವಿಷಯ ಸೂಚಿಸುವುದಿಲ್ಲ. ಪರಿಣಾಮವಾಗಿ ಸಿಬಿಐ ತನಿಖೆಯ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಏಕಸದಸ್ಯ ಪೀಠದ ನ್ಯಾಯಾಧೀಶರು ಸ್ಪಷ್ಟಪಡಿಸಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

15 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

15 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

15 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

16 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

16 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

17 hours ago