ಬೆಂಗಳೂರು: ಮೈಸೂರಿನ ಮುಡಾ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆ(CBI)ಗೆ ವಹಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮಂಗಳವಾರ (ನ.05) ನಡೆಸಿದ ಹೈಕೋರ್ಟ್, ನವೆಂಬರ್ 25ರವರೆಗೆ ನಡೆದ ತನಿಖೆಯ ವಿವರ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿ, ನ.26ಕ್ಕೆ ವಿಚಾರಣೆ ಮುಂದೂಡಿದೆ.
ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಇಂದು ಹೈಕೋರ್ಟ್ ನಡೆಸಿದೆ. ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಕೆ.ಜಿ. ರಾಘವನ್ ವಾದ ಮಂಡಿಸಿ, ಮುಡಾ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಮನವಿ ಮಾಡಿದರು.
ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠವು ಅರ್ಜಿಯ ವಿಚಾರಣೆ ನಡೆಸಿ, ನ.25ರವರೆಗೆ ನಡೆದ ತನಿಖೆಯ ವಿವರ ಒದಗಿಸಲು ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿ, ಸಿಬಿಐ ಮತ್ತು ಲೋಕಾಯುಕ್ತ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವಾರಗಳ ಕಾಲಾವಕಾಶ ನೀಡಬೇಕೆಂದು ರಾಜ್ಯ ಅಭಿಯೋಜಕ ಬಿ.ಎನ್.ಜಗದೀಶ್ ಅವರು ಮನವಿ ಮಾಡಿಕೊಂಡರು. ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ದೇವರಾಜುಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…