ಬೆಂಗಳೂರು:ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ನೇತೃತ್ವದಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಸಿಆರ್‌ಪಿಸಿ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ಎಂದು ಕೋರ್ಟ್ ಆದೇಶ ಕೂಡಾ ನೀಡಿತ್ತು. ಅದೇ ಕಾಯ್ದೆಯಡಿ ಇದೀಗ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.
ನ್ಯಾಯಾಲಯ ಸೂಚಿಸಿರುವ ಐಪಿಸಿ ಸೆಕ್ಷನ್ ಭ್ರಷ್ಟಾಚಾರ ತಡೆ ಕಾಯ್ದೆ, ಬೇನಾಮಿ ಆಸ್ತಿ ವಹಿವಾಟು ಕಾಯ್ದೆ, ಭೂ ಕಬಳಿಕೆ ನಿರ್ಬಂಧ ಕಾಯ್ದೆಯಡಿ ಲೋಕಾಯುಕ್ತ ಎಫ್ಐಆರ್ ದಾಖಲಿಸಿದೆ. ಸಿಎಂ ಸಿದ್ದರಾಮಯ್ಯ A 1 ಆರೋಪಿಯಾಗಿದ್ದರೆ, ಪತ್ನಿ ಪಾರ್ವತಿ A 2 ಆರೋಪಿಯಾಗಿದ್ದಾರೆ. ಇನ್ನು ಮಲ್ಲಿಕಾರ್ಜುನ A 3, ದೇವರಾಜು ಎ4 ಹಾಗೂ ಎ5 ಇತರರು ಎಂದು ಎಫ್ಐಆರ್ನಲ್ಲಿ ದಾಖಲು ಮಾಡಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…