Featured

ಮುಡಾ ಹಗರಣ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು – vishwanews24

ಮುಡಾ ಹಗರಣ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು

ಬೆಂಗಳೂರು:ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್‌ ಪಿ ಉದೇಶ್ ನೇತೃತ್ವದಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಸಿಆರ್‌ಪಿಸಿ ಅಡಿಯಲ್ಲಿ ಎಫ್​ಐಆರ್​ ದಾಖಲಿಸಿ ಎಂದು ಕೋರ್ಟ್​ ಆದೇಶ ಕೂಡಾ ನೀಡಿತ್ತು. ಅದೇ ಕಾಯ್ದೆಯಡಿ ಇದೀಗ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು ಮಾಡಲಾಗಿದೆ.

ನ್ಯಾಯಾಲಯ ಸೂಚಿಸಿರುವ ಐಪಿಸಿ ಸೆಕ್ಷನ್ ಭ್ರಷ್ಟಾಚಾರ ತಡೆ ಕಾಯ್ದೆ, ಬೇನಾಮಿ ಆಸ್ತಿ ವಹಿವಾಟು ಕಾಯ್ದೆ, ಭೂ ಕಬಳಿಕೆ ನಿರ್ಬಂಧ ಕಾಯ್ದೆಯಡಿ ಲೋಕಾಯುಕ್ತ ಎಫ್​ಐಆರ್ ದಾಖಲಿಸಿದೆ. ಸಿಎಂ ಸಿದ್ದರಾಮಯ್ಯ A 1 ಆರೋಪಿಯಾಗಿದ್ದರೆ, ಪತ್ನಿ ಪಾರ್ವತಿ A 2 ಆರೋಪಿಯಾಗಿದ್ದಾರೆ. ಇನ್ನು ಮಲ್ಲಿಕಾರ್ಜುನ A 3, ದೇವರಾಜು ಎ4 ಹಾಗೂ ಎ5 ಇತರರು ಎಂದು ಎಫ್​ಐಆರ್​ನಲ್ಲಿ ದಾಖಲು ಮಾಡಲಾಗಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

2 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

3 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

3 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

3 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

5 hours ago