Featured

ಮುಡಾ ಹಗರಣ : ಮೈಸೂರು ಡಿಸಿ ಡಾ.ಕೆ.ವಿ ರಾಜೇಂದ್ರ  ದಿಢೀರ್‌ ವರ್ಗಾವಣೆ ; ಏನಿದು ಹಗರಣ ? vishwanews24

ಮುಡಾ ಹಗರಣ : ಮೈಸೂರು ಡಿಸಿ ಡಾ.ಕೆ.ವಿ ರಾಜೇಂದ್ರ  ದಿಢೀರ್‌ ವರ್ಗಾವಣೆ ; ಏನಿದು ಹಗರಣ ?

ಮೈಸೂರು: ಮುಡಾ ಹಗರಣದ ಬಗ್ಗೆ ಪತ್ರ ಬರೆದಿದ್ದ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ನೂತನ‌ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿಕಾಂತ ರೆಡ್ಡಿಯನ್ನು ನೇಮಕ ಮಾಡಿದೆ.

ಈ ಹಿಂದೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಲಕ್ಷ್ಮಿ ಕಾಂತರೆಡ್ಡಿ ಈಗ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ. ಬೆಂಗಳೂರಿನ ಕೆಯುಐಡಿಎಫ್​ಸಿಯಲ್ಲಿ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದ ಲಕ್ಷ್ಮಿಕಾಂತ್​ ರೆಡ್ಡಿಯನ್ನು ಮೈಸೂರಿಗೆ ವರ್ಗಾವಣೆ ಮಾಡಲಾಗಿದೆ. ಡಾ.ಕೆ.ವಿ.ರಾಜೇಂದ್ರ ಅವರನ್ನು ಪ್ರವಾಸೋದ್ಯಮ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.

ಈ ಹಿಂದೆ ಮುಡಾ ಹಗರಣದ ಬಗ್ಗೆ ಡಿಸಿ ಕೆ.ವಿ ರಾಜೇಂದ್ರ ಸರ್ಕಾರಕ್ಕೆ ಸುದೀರ್ಘ ಪತ್ರ ಬರೆದಿದ್ದರು. ಮುಡಾದ 50:50 ಸೈಟು ವಿಷಯದಲ್ಲಿ ಸರ್ಕಾರದ ಕಾರ್ಯದರ್ಶಿಗೂ ಪತ್ರ ಬರೆದಿದ್ದರು. ಡಿಸಿ ಪತ್ರ ಬೆಳಕಿಗೆ ಬಂದ ಮರುದಿನವೇ ವರ್ಗಾವಣೆಯಾಗಿದೆ. ಕೆವಿ ರಾಜೇಂದ್ರ ಸೇರಿದಂತೆ ಒಟ್ಟು 21 ಐಎಎಸ್​ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಏನಿದು ಮುಡಾ ಹಗರಣ..?
ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿಚಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. 50:50 ಅನುಪಾತದಡಿ ಸರಿಯಾಗಿ ಹಂಚಿಕೆ ಮಾಡದೇ ಬೇಕಾಬಿಟ್ಟಿ ಹಂಚಿಕೆ ಮಾಡಲಾಗಿದ್ದು, ಅಂದಾಜು 5 ಸಾವಿರ ಕೋಟಿಯಷ್ಟು ಭಾರೀ ಅಕ್ರಮ ನಡೆದಿದೆ ಎಂಬ ಆರೋಪಗಳು ಇವೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago