ಮೈಸೂರು: ಮುಡಾ ಹಗರಣದ ಬಗ್ಗೆ ಪತ್ರ ಬರೆದಿದ್ದ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿಕಾಂತ ರೆಡ್ಡಿಯನ್ನು ನೇಮಕ ಮಾಡಿದೆ.
ಈ ಹಿಂದೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಲಕ್ಷ್ಮಿ ಕಾಂತರೆಡ್ಡಿ ಈಗ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ. ಬೆಂಗಳೂರಿನ ಕೆಯುಐಡಿಎಫ್ಸಿಯಲ್ಲಿ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದ ಲಕ್ಷ್ಮಿಕಾಂತ್ ರೆಡ್ಡಿಯನ್ನು ಮೈಸೂರಿಗೆ ವರ್ಗಾವಣೆ ಮಾಡಲಾಗಿದೆ. ಡಾ.ಕೆ.ವಿ.ರಾಜೇಂದ್ರ ಅವರನ್ನು ಪ್ರವಾಸೋದ್ಯಮ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.
ಈ ಹಿಂದೆ ಮುಡಾ ಹಗರಣದ ಬಗ್ಗೆ ಡಿಸಿ ಕೆ.ವಿ ರಾಜೇಂದ್ರ ಸರ್ಕಾರಕ್ಕೆ ಸುದೀರ್ಘ ಪತ್ರ ಬರೆದಿದ್ದರು. ಮುಡಾದ 50:50 ಸೈಟು ವಿಷಯದಲ್ಲಿ ಸರ್ಕಾರದ ಕಾರ್ಯದರ್ಶಿಗೂ ಪತ್ರ ಬರೆದಿದ್ದರು. ಡಿಸಿ ಪತ್ರ ಬೆಳಕಿಗೆ ಬಂದ ಮರುದಿನವೇ ವರ್ಗಾವಣೆಯಾಗಿದೆ. ಕೆವಿ ರಾಜೇಂದ್ರ ಸೇರಿದಂತೆ ಒಟ್ಟು 21 ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ಏನಿದು ಮುಡಾ ಹಗರಣ..?
ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿಚಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. 50:50 ಅನುಪಾತದಡಿ ಸರಿಯಾಗಿ ಹಂಚಿಕೆ ಮಾಡದೇ ಬೇಕಾಬಿಟ್ಟಿ ಹಂಚಿಕೆ ಮಾಡಲಾಗಿದ್ದು, ಅಂದಾಜು 5 ಸಾವಿರ ಕೋಟಿಯಷ್ಟು ಭಾರೀ ಅಕ್ರಮ ನಡೆದಿದೆ ಎಂಬ ಆರೋಪಗಳು ಇವೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…