Featured

ಮುತಾಲಿಕ್ ರವರನ್ನು ಚುನಾವಣೆಯಲ್ಲಿ ಗೆಲ್ಲಿಸಿ ವಿಧಾನಸಭೆಗೆ ಭಗವಾಧ್ವಜ ಮೂಲಕ ಕಳುಹಿಸಿವುದು ನಿಶ್ಚಿತ : ಉಡುಪಿ ಶ್ರೀರಾಮ ಸೇನೆ – VIshwanews24

ಮುತಾಲಿಕ್ ರವರನ್ನು ಚುನಾವಣೆಯಲ್ಲಿ ಗೆಲ್ಲಿಸಿ ವಿಧಾನಸಭೆಗೆ ಭಗವಾಧ್ವಜ ಮೂಲಕ ಕಳುಹಿಸಿವುದು ನಿಶ್ಚಿತ : ಉಡುಪಿ ಶ್ರೀರಾಮ ಸೇನೆ

ಉಡುಪಿ: ಹಿಂದುತ್ವಕ್ಕಾಗಿ ತನ್ನ ಸರ್ವಸ್ವವನ್ನೇ ತ್ಯಾಗ ಮಾಡಿರುವ ಪ್ರಮೋದ್ ಮುತಾಲಿಕ್ ಅವರು ಕಾರ್ಕಳದಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದು ನಮಗೆಲ್ಲ ಅತ್ಯಂತ ಸಂತೋಷದ ವಿಷಯ. ಅದರಲ್ಲೂ ಧರ್ಮೋದ್ಧಾರಕ ಶ್ರೀಕೃಷ್ಣನ ನಾಡಾದ ಉಡುಪಿಯ ನೆರೆಯ ಕ್ಷೇತ್ರವಾದ ಕಾರ್ಕಳದಲ್ಲಿ ಸ್ಪರ್ಧಿಸುತ್ತಿರುವುದು ಶ್ರೀಕೃಷ್ಣನ ಅಭಯವೇ ಹೊರತು ಬೇರೇನಿಲ್ಲ.

ಮುತಾಲಿಕ್ ರವರು ಕಾರ್ಕಳದಲ್ಲಿ ಸ್ಪರ್ಧೆಯನ್ನು ಖಚಿತ ಮಾಡಿದ ನಂತರ ಉಡುಪಿ ಜಿಲ್ಲಾ ಶ್ರೀರಾಮ ಸೇನೆಯು ಅವರ ಹಿಂದಿದೆ. ನಮಗೆ ವ್ಯಕ್ತಿ, ಪಕ್ಷಕಿಂತ ಹಿಂದುತ್ವನೇ ಮುಖ್ಯ ಎಂಬ ಆಧಾರದಲ್ಲಿ ಹಿಂದುತ್ವದ ಪ್ರಬಲ ನಾಯಕನನ್ನು ವಿಧಾನಸಭೆಗೆ ಕಳಿಸುವುದು ನಾವಂತೂ ಖಚಿತ. ಇದರಲ್ಲಿ ನಮ್ಮ ಕಾರ್ಯಕರ್ತರು, ಮುತಾಲಿಕ್ ಅಭಿಮಾನಿಗಳು, ಸರ್ವ ಹಿಂದೂ ಅಭಿಮಾನಿಗಳಿಗೆ ಯಾವುದೇ ಸಂಶಯ ಬೇಡ. 2 ದಿವಸದ ಹಿಂದೆ ಕಾರ್ಕಳದಲ್ಲಿ ಮುತಾಲಿಕರವರ ಸಂಘಟನಾ ಕಾರ್ಯಾಲಯ ಪಾಂಚಜನ್ಯ ಉದ್ಘಾಟನೆಗೊಂಡಿತ್ತು. ಇದರಲ್ಲಿ 150ಕ್ಕೂ ಹೆಚ್ಚು ಉಡುಪಿಯ ಶ್ರೀರಾಮ ಸೇನೆಯ ಕಾರ್ಯಕರ್ತರು ಭಾಗವಹಿಸಿರುವುದು ಇದಕ್ಕೆಲ್ಲ ಸಾಕ್ಷಿಯಾಗಿದೆ.

ಅದಲ್ಲದೆ ರಾಜ್ಯದ 22 ಜಿಲ್ಲೆಗಳ ಶ್ರೀರಾಮಸೇನೆಯ ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿರುವುದು ವಿಶೇಷವಾಗಿದೆ. ಅಷ್ಟೇ ಅಲ್ಲದೆ ಸುಮಾರು ನೂರಕ್ಕಿಂತಲೂ ಹೆಚ್ಚು ಕಾರ್ಯಕರ್ತರು ರಾಜ್ಯದಿಂದ ಪೂರ್ಣವಾದಿಯಾಗಿ ದುಡಿಯಲು ಈಗಾಗಲೇ ಬೀಡು ಬಿಟ್ಟಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯಕರ್ತರು ಮುಂದಿನ ಕೆಲವೇ ದಿನಗಳಿಂದ ಬೂತ್ ಮಟ್ಟದಿಂದ ಪ್ರಚಾರವನ್ನು ಕೈಗೊಳ್ಳಲಿದ್ದಾರೆ. ಒಬ್ಬ ಪ್ರಖರ ಹಿಂದೂ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರು ನಮ್ಮದೇ ನೆರೆಯ ಕಾರ್ಕಳ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವುದು ಉಡುಪಿ ಜಿಲ್ಲೆಯವರಿಗೆ ಹೆಮ್ಮೆಯ ವಿಷಯ. ಹಾಗಾಗಿ ಕಾರ್ಕಳ ಕ್ಷೇತ್ರದ ಅಪಾರ ಹಿಂದೂ ಅಭಿಮಾನಿಗಳು, ವಿವಿಧ ಸಂಘಟನೆಯ/ ಪಕ್ಷಗಳ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಮುತಾಲಿಕ್ ರವರನ್ನು ಬೆಂಬಲಿಸಿರುವುದು ಅತ್ಯಂತ ಸಂತೋಷದ ವಿಷಯ.

ಮುತಾಲಿಕ್ ರವರನ್ನು ಚುನಾವಣೆಯಲ್ಲಿ ಗೆಲ್ಲಿಸಿ ವಿಧಾನಸಭೆಗೆ ಭಗವಾಧ್ವಜ ಮೂಲಕ ಕಳುಹಿಸಿವುದು ನಿಶ್ಚಿತ. ಕಾರ್ಯಕರ್ತರಲ್ಲಿ ಯಾವುದೇ ಗೊಂದಲ ಬೇಡ ಮುತಾಲಿಕ್ ರವರ ಹಿಂದುತ್ವದ ಗೆಲುವು ನಿಶ್ಚಿತ ಎಂದು ಶ್ರೀರಾಮಸೇನೆಯ ಉಡುಪಿ ಜಿಲ್ಲಾಧ್ಯಕ್ಷ ಜಯರಾಂ ಅಂಬೆಕಲ್ಲು ಹಾಗೂ ಜಿಲ್ಲಾ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Vishwa News 24

Recent Posts

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

21 minutes ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

53 minutes ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

14 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

18 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

20 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

21 hours ago