ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

Featured, ಉಡುಪಿ

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ

ಮುದರಂಗಡಿ: ಕಾಪು ತಾಲೂಕಿನ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿರುವ ‘ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲೀಕ ಡೇವಿಡ್ ಡಿಸೋಜಾ ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತನಿಖೆ ಚುರುಕುಗೊಂಡಿದ್ದು, ಕೃತ್ಯಕ್ಕೆ ಹಣಕಾಸಿನ ನೆರವು ನೀಡಿದ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆಗಸ್ಟ್ 7ರಂದು ಮಧ್ಯಾಹ್ನ 3:45ರ ಸುಮಾರಿಗೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಡೇವಿಡ್ ಡಿಸೋಜಾ ಅವರ ತಲೆಗೆ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದರು. ಈ ಪ್ರಕರಣದಲ್ಲಿ ಕೊಲೆ ಎಸಗಿದ ಮೂವರು ಮುಖ್ಯ ಆರೋಪಿಗಳನ್ನು ಪೊಲೀಸರು ಈಗಾಗಲೇ ದಸ್ತಗಿರಿ ಮಾಡಿದ್ದು, ತನಿಖೆ ಮುಂದುವರಿಸಿದ್ದರು. ಈ ವೇಳೆ ಕೃತ್ಯ ಎಸಗಲು ಹಣ ವರ್ಗಾವಣೆ ಮಾಡಿ ಸಹಕರಿಸಿದ ಎರ್ಮಾಳ್ ತೆಂಕ ಗ್ರಾಮದ ಚಿರಾಗ್ ಪೂಜಾರಿ (26) ಹಾಗೂ ಮೊಹಮ್ಮದ್ ಇರ್ಷಾದ್ (43) ಎಂಬವರನ್ನು ಆಗಸ್ಟ್ 12ರಂದು ಪೊಲೀಸರು ಬಂಧಿಸಿ, ತನಿಖೆ ಒಳಪಡಿಸಿದ್ದಾರೆ.

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

Leave a Reply