ಮುದರಂಗಡಿ: ಕಾಪು ತಾಲೂಕಿನ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿರುವ ‘ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲೀಕ ಡೇವಿಡ್ ಡಿಸೋಜಾ ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತನಿಖೆ ಚುರುಕುಗೊಂಡಿದ್ದು, ಕೃತ್ಯಕ್ಕೆ ಹಣಕಾಸಿನ ನೆರವು ನೀಡಿದ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆಗಸ್ಟ್ 7ರಂದು ಮಧ್ಯಾಹ್ನ 3:45ರ ಸುಮಾರಿಗೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಡೇವಿಡ್ ಡಿಸೋಜಾ ಅವರ ತಲೆಗೆ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದರು. ಈ ಪ್ರಕರಣದಲ್ಲಿ ಕೊಲೆ ಎಸಗಿದ ಮೂವರು ಮುಖ್ಯ ಆರೋಪಿಗಳನ್ನು ಪೊಲೀಸರು ಈಗಾಗಲೇ ದಸ್ತಗಿರಿ ಮಾಡಿದ್ದು, ತನಿಖೆ ಮುಂದುವರಿಸಿದ್ದರು. ಈ ವೇಳೆ ಕೃತ್ಯ ಎಸಗಲು ಹಣ ವರ್ಗಾವಣೆ ಮಾಡಿ ಸಹಕರಿಸಿದ ಎರ್ಮಾಳ್ ತೆಂಕ ಗ್ರಾಮದ ಚಿರಾಗ್ ಪೂಜಾರಿ (26) ಹಾಗೂ ಮೊಹಮ್ಮದ್ ಇರ್ಷಾದ್ (43) ಎಂಬವರನ್ನು ಆಗಸ್ಟ್ 12ರಂದು ಪೊಲೀಸರು ಬಂಧಿಸಿ, ತನಿಖೆ ಒಳಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…