Featured

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌ ಡಿಸೋಜಾ (55) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಪೊಲೀಸ್‌ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಆಗಸ್ಟ್‌ 7ರಂದು ಮಧ್ಯಾಹ್ನ 3.45ರ ಸುಮಾರಿಗೆ ಕಾಪು ತಾಲ್ಲೂಕಿನ ಮುದರಂಗಡಿಯ ಸೆಂಟ್‌ ಕ್ಷೇವಿಯರ್‌ ಚರ್ಚ್‌ ಕಾಂಪ್ಲೆಕ್ಸ್‌ನಲ್ಲಿರುವ ಪ್ರಿನ್ಸ್‌ ಎಂಟರ್‌ಪ್ರೈಸಸ್‌ ಕಚೇರಿಗೆ ಬಂದಿದ್ದ ಡೇವಿಡ್‌ ಡಿಸೋಜಾ, ಬಳಿಕ ತಮ್ಮ ಥಾರ್‌ ವಾಹನದ ಚಾಲಕನ ಬದಿಯ ಬಾಗಿಲ ಬಳಿ ತೆರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ತಲೆಗೆ ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡ ಅವರನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದರು.

ಈ ಸಂಬಂಧ ಶಿರ್ವ ಪೊಲೀಸ್‌ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು.

ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ಮೂವರು ಆರೋಪಿಗಳು ಬಸ್‌ನಲ್ಲಿ ಭಟ್ಕಳದ ಕಡೆಗೆ ತೆರಳುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಬೈಂದೂರಿನ ಒತ್ತಿನಾಣೆ ಬಳಿ ಬಸ್‌ ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ಆರೋಪಿಗಳು ಬಸ್‌ನಿಂದ ಇಳಿದು ಪರಾರಿಯಾಗಲು ಯತ್ನಿಸಿದರು.

ಆರೋಪಿಗಳನ್ನು ಬೆನ್ನಟ್ಟಿದ ವೇಳೆ ರಾಜು (42), ಉತ್ತರ ಪ್ರದೇಶದ ಥಾಣಾ ಪಿಲ್ವ ನಿವಾಸಿ, ಕಾಪು ಠಾಣೆಯ ಪಿಎಸ್‌ಐ ತೇಜಸ್ವಿ ಅವರನ್ನು ದೂಡಿ, ಪಿಸ್ತೂಲ್‌ನಿಂದ ಪೊಲೀಸರತ್ತ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ. ಆತನ ಬಳಿಯಿದ್ದ ಪಿಸ್ತೂಲ್‌ನ್ನೂ ವಶಪಡಿಸಿಕೊಳ್ಳಲಾಗಿದೆ. ಗುಂಡಿನ ದಾಳಿಯಲ್ಲಿ ಪಿಎಸ್‌ಐ ತೇಜಸ್ವಿ ಗಾಯಗೊಂಡಿದ್ದು, ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ರಾಜು ಕೂಡ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಪರಾರಿಯಾಗಿದ್ದ ಇನ್ನಿಬ್ಬರು ಆರೋಪಿಗಳಾದ ಉತ್ತರಾಖಂಡದ ಅಜಯ್‌ ರಸ್ತೋಗಿ ಅಲಿಯಾಸ್‌ ಅನ್ಮೋಲ್‌ (23) ಅವರನ್ನು ಕುಮಟಾ ಪೊಲೀಸರ ಸಹಕಾರದಿಂದ ಕುಮಟಾದಲ್ಲಿ ಹಾಗೂ ಬಿಹಾರದ ಜಿಯಾಹುಲ್‌ ವಜೂಲ್‌ ಶೇಖ್‌ ಅಲಿಯಾಸ್‌ ದೀಪಕ್‌ (38) ಅವರನ್ನು ಭಟ್ಕಳ ಪೊಲೀಸರ ಸಹಕಾರದಿಂದ ಭಟ್ಕಳದಲ್ಲಿ ಶನಿವಾರ ಬೆಳಿಗ್ಗೆ ವಶಕ್ಕೆ ಪಡೆಯಲಾಗಿದೆ.

ಹಣಕಾಸಿನ ವೈಮನಸ್ಸು: ಡೇವಿಡ್‌ ಡಿಸೋಜಾ ನಡೆಸುತ್ತಿದ್ದ ಕಾಮಗಾರಿಗೆ ಸಂಬಂಧಿಸಿದಂತೆ ಅನ್ಯ ರಾಜ್ಯದ ಕಂಪೆನಿಯೊಂದರೊಂದಿಗೆ ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಉಂಟಾಗಿತ್ತು. ಇದೇ ಹಿನ್ನೆಲೆಯಲ್ಲಿ ಅವರನ್ನು ಹತ್ಯೆ ಮಾಡಲು ಸುಪಾರಿ ನೀಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯಕ್ಕೆ ಸಹಕರಿಸಿದವರು, ಹಣಕಾಸಿನ ನೆರವು ನೀಡಿದವರು ಹಾಗೂ ಆರೋಪಿಗಳಿಗೆ ಆಶ್ರಯ ನೀಡಿದವರ ಪತ್ತೆ ಕಾರ್ಯ ಮುಂದುವರಿದಿದೆ.

ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಬೈಕ್‌ ಅನ್ನು ಎರ್ಮಾಳ್‌ನಲ್ಲಿ ಬಿಟ್ಟು ಹೋಗಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್‌ ಉಪಾಧೀಕ್ಷಕ ಬೆಳ್ಳಿಯಪ್ಪ ಅವರ ನೇತೃತ್ವದಲ್ಲಿ ಕಾಪು ವೃತ್ತ ನಿರೀಕ್ಷಕ ಅಝ್ಮತ್‌ ಆಲಿ ಜಿ., ಡಿಎಸ್‌ಬಿ ವಿಭಾಗದ ಪಿಐ ಹರೀಶ್‌, ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್‌, ಕುಂದಾಪುರ ವೃತ್ತ ನಿರೀಕ್ಷಕ ಸಂತೋಷ್‌ ಕಾಯ್ಕಿಣಿ, ವಿವಿಧ ಠಾಣೆಗಳ ಪಿಎಸ್‌ಐಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಭಟ್ಕಳ ಮತ್ತು ಕುಮಟಾ ಪೊಲೀಸರು, ಜಿಲ್ಲಾ ಅಪರಾಧ ಪರಿಶೀಲನಾ ತಂಡ, ಬೆರಳಚ್ಚು, ಶ್ವಾನದಳ ಹಾಗೂ ಸಿಡಿಆರ್‌ ಸೆಲ್‌ ತಂಡವೂ ಕಾರ್ಯಾಚರಣೆಗೆ ಸಹಕರಿಸಿವೆ.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

13 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

13 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

14 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

15 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

18 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

18 hours ago