Featured

ಮುದರಂಗಡಿ: ನೂತನವಾಗಿ ನಿರ್ಮಾಣವಾಗಲಿರುವ ಗ್ರಾಪಂ ಕಟ್ಟಡಕ್ಕೆ ಶಾಸಕ ಲಾಲಾಜಿ ಶಿಲಾನ್ಯಾಸ -Vishwanews24

ಮುದರಂಗಡಿ: ನೂತನವಾಗಿ ನಿರ್ಮಾಣವಾಗಲಿರುವ ಗ್ರಾಪಂ ಕಟ್ಟಡಕ್ಕೆ ಶಾಸಕ ಲಾಲಾಜಿ ಶಿಲಾನ್ಯಾಸ -Vishwanews24

ಗ್ರಾ. ಪಂ ಕಟ್ಟಡಕ್ಕೆ ಶಾಸಕರ ನಿಧಿಯಿಂದ 10ಲಕ್ಷ ರೂಪಾಯಿ ಅನುದಾನ ಒದಗಿಸುವುದಾಗಿ  ಭರವಸೆ ..

ಮುದರಂಗಡಿ: ನೂತನವಾಗಿ ನಿರ್ಮಾಣವಾಗಲಿರುವ ಮುದರಂಗಡಿ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಶಾಸಕರ ನಿಧಿಯಿಂದ 10ಲಕ್ಷ ರೂಪಾಯಿ ಅನುದಾನ ಒದಗಿಸುವುದಾಗಿ ಶಾಸಕ ಲಾಲಾಜಿ ಆರ್ ಮೆಂಡನ್ ಭರವಸೆ ನೀಡಿದರು.

ಸುಮಾರು 65ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಗ್ರಾಪಂ ಕಟ್ಟಡಕ್ಕೆ ಮುದರಂಗಡಿಯಲ್ಲಿ ಬುಧವಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು,ಕೆಆರ್ ಐ ಡಿ ಎಲ್ ನಿರ್ವಹಣೆಯಲ್ಲಿ ಗ್ರಾಮ ವಿಕಾಸ ಯೋಜನೆಯಡಿ ಕಾಯ್ದಿರಿಸಿದ 29 ಲಕ್ಷ ಅನುದಾನದಲ್ಲಿ ಮೊದಲ ಹಂತದಲ್ಲಿ ನೆಲ ಅಂತಸ್ತಿನ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಎರಡನೇ ಹಂತದಲ್ಲಿ ವಿವಿಧ ಅನುದಾನಗಳನ್ನು ಕ್ರೋಡಿಕರಿಸಿ ಮೇಲು ಅಂತಸ್ತಿನ ಕಾಮಗಾರಿ ನಡೆಯಲಿದೆ ಎಂದರು.

ಅರ್ಚಕ ಮಾಧವ ಭಟ್ ಶಿಲಾನ್ಯಾಸ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಮುದರಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯೋಗಿನಿ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಶಿಲ್ಪಾ ಜಿ ಸುವರ್ಣ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಮೈಕಲ್ ರಮೇಶ್ ಡಿಸೋಜ, ಕಾರ್ಯನಿರ್ವಹಣಾಧಿಕಾರಿ ವಿವೇಕಾನಂದ ಗಾಂವ್ ಕರ್, ಗ್ರಾಪಂ ಸದಸ್ಯರಾದ ರವೀಂದ್ರ ಪ್ರಭು, ಶಿವರಾಮ ಭಂಡಾರಿ, ಬಾಲಚಂದ್ರ ಶೆಟ್ಟಿ, ಮೋಹಿನಿ ಹೆಗ್ಡೆ, ಸವಿತಾ ಪೂಜಾರಿ, ಇಂದಿರಾ ಆಚಾರ್ಯ, ಪಿಡಿಒ ಸುರೇಶ್, ಗ್ರಾಮ ಕರಣಿಕ ಜಗದೀಶ್, ಕೆಆರ್ ಐ ಡಿ ಎಲ್ ಇಂಜಿನಿಯರ್ ಗಳಾದ ದಿನೇಶ್, ದಿವ್ಯರಾಜ್, ಗುತ್ತಿಗೆದಾರ ರಾಘವೇಂದ್ರ ಶೆಟ್ಟಿ, ಉದ್ಯಮಿ ಗಂಗಾಧರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

2 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

2 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

2 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

3 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago