Featured

ಮುಮ್ತಾಝ್ ಅಲಿ ಪ್ರಕರಣ : ಪೊಲೀಸರಿಂದ 6 ಮಂದಿಯ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ – vishwanews24

ಸುರತ್ಕಲ್: ಮುಮ್ತಾಝ್ ಅಲಿ ಪ್ರಕರಣ ; ಪೊಲೀಸರಿಂದ 6 ಮಂದಿಯ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ

ಸುರತ್ಕಲ್: ಧಾರ್ಮಿಕ ಮುಂದಾಳು ಹಾಗೂ ಉದ್ಯಮಿ ಬಿ.ಎಂ.ಮುಮ್ತಾಝ್ ಅಲಿ ಪ್ರಕರಣಕ್ಕೆ ಸಂಬಂಧಿಸಿ ರಹ್ಮತ್ ಸೇರಿ ಒಟ್ಟು ಆರು ಮಂದಿ ಆರೋಪಿಗಳ ವಿರುದ್ಧ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ನೂರಕ್ಕೂ ಅಧಿಕ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿದ್ದ ಪೊಲೀಸರು, ಸೋಮವಾರ ಸಂಜೆ ಮಂಗಳೂರಿನ ಜೆಎಂಎಫ್ ಸಿ ನ್ಯಾಯಾಲಯಕ್ಕೆ 2,250 ಪುಟಗಳ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಮುಖ ಆರೋಪಿ ಎನ್ನಲಾದ ಸುರತ್ಕಲ್ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ರಹ್ಮತ್ ಮತ್ತು ಆಕೆಯ ಪತಿ ಪ್ರಕರಣದ 5ನೇ ಆರೋಪಿ ಶುಐಬ್, ಎ2 ಆರೋಪಿ ಅಬ್ದುಲ್ ಸತ್ತಾರ್, ಎ3 ಆರೋಪಿ ನಂದಾವರ ನಿವಾಸಿ ಕಲಂದರ್ ಶಾಫಿ, ಎ4 ಆರೋಪಿ ಕೃಷ್ಣಾಪುರ ನಿವಾಸಿ ಮುಸ್ತಫ ಹಾಗೂ 6ನೇ ಆರೋಪಿ ಸತ್ತಾರ್ ನ ಕಾರು ಚಾಲಕ ಸಿರಾಜ್ ಎಂಬವರ ವಿರುದ್ಧ ಪ್ರಕರಣದ ತನಿಖಾಧಿಕಾರಿಯಾಗಿರುವ ಸುರತ್ಕಲ್ ಪೊಲೀಸ್ ಠಾಣೆಯ ನಿರೀಕ್ಷಕ ಮಹೇಶ್ ಪ್ರಸಾದ್ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

2024ರ ಅ.7ರಂದು ಮುಮ್ತಾಝ್ ಅಲಿಯವರ ಕಾರು ಅಪಘಾತಕ್ಕೀಡಾದ ಸ್ಥಿತಿಯಲ್ಲಿ ಕೂಳೂರು ಸೇತುವೆಯಲ್ಲಿ ಪತ್ತೆಯಾಗಿತ್ತು. ಅವರ ಮೃತದೇಹ ಅ.8ರಂದು ನದಿಯಲ್ಲಿ ಪತ್ತೆಯಾಗಿತ್ತು.

ಈ ಮಧ್ಯೆ ರಹ್ಮತ್, ಅಬ್ದುಲ್ ಸತ್ತಾರ್, ಕಲಂದರ್ ಶಾಫಿ, ಮುಸ್ತಫ, ಶುಐಬ್ ಮತ್ತು ಸಿರಾಜ್ ಎಂಬವರು ಮಾನಸಿಕ ಕಿರುಕುಳದಿಂದ ಬೇಸತ್ತು ಮುಮ್ತಾಝ್ ಅಲಿ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಶಂಕೆ ವ್ಯಕ್ತಪಡಿಸಿ ಮೃತರ ಸಹೋದರ ಹೈದರ್ ಅಲಿ ಪೊಲೀಸ್ ದೂರು ನೀಡಿದ್ದರು.

ಈ ದೂರಿನನ್ವಯ ಐಪಿಸಿ 308(2), 308(5), 352, 351(2) 190 BNS ಕಾಯ್ದೆಯಡಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಇದೀಗ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

18 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

18 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

18 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

21 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

21 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

21 hours ago