ಮುರುಘಾ ಶ್ರೀ ಪ್ರಕರಣ : ಮುರುಘಾ ಮಠದ ಹಾಸ್ಟೆಲ್ ವಾರ್ಡನ್ ರಶ್ಮಿ ಬಂಧನ – Vishwanews24

Featured, ರಾಜ್ಯ ನ್ಯೂಸ್

ಮುರುಘಾ ಮಠದ ಹಾಸ್ಟೆಲ್ ವಾರ್ಡನ್ ರಶ್ಮಿ ಬಂಧನ

ಚಿತ್ರದರ್ಗ: ಪೋಕ್ಸೋ ಪ್ರಕರಣ ದಲ್ಲಿ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ  ಬಂಧನ ಸಂಬಂಧ ಆಗಿರುವ ಲೇಡಿ ವಾರ್ಡನ್​ನ್ನು ಚಿತ್ರದುರ್ಗ ಪೊಲೀಸರಿಂದ ಬಂಧನ ಮಾಡಲಾಗಿದೆ.

ನಿನ್ನೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಪೊಲೀಸರು, ಇಂದು ಬಂಧಿಸಿ ವೈದ್ಯಕೀಯ ತಪಾಸಣೆಗೆ ಕರೆದುಕೊಂಡು ಹೋಗಿದ್ದಾರೆ.

ಮುರುಘಾಶ್ರೀ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಬಂಧನವಾಗಿದೆ. ಸ್ವಾಮೀಜಿ ಅವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್​ ಹೇಳುತ್ತಿದ್ದರು ಎಂದು ಸಂತ್ರಸ್ತ ಬಾಲಕಿಯರು ವಿಚಾರಣೆಯಲ್ಲಿ ಆರೋಪ ಮಾಡಿದ್ದಾರೆ.

ಹಾಸ್ಟೆಲ್​​ನ ಮಹಿಳಾ ವಾರ್ಡನ್, ಎಸ್.ಕೆ.ಬಸವರಾಜನ್ ವಿರುದ್ಧ ​​ಅತ್ಯಾಚಾರಕ್ಕೆ ಯತ್ನ, ಹಿಂಸೆ ನೀಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದರು. ಆ. 26 ರಂದು ಎಸ್.ಕೆ.ಬಸವರಾಜನ್ ವಿರುದ್ಧ ಸೆಕ್ಷನ್​​ 354ರಡಿ ಪ್ರಕರಣ ದಾಖಲಾಗಿದೆ. ಬಸವರಾಜನ್ ಹಾಗೂ ಪತ್ನಿ ಸೌಭಾಗ್ಯ ಬಸವರಾಜನ್ ವಿರುದ್ಧ IPC ಸೆಕ್ಷನ್​​​ 341, 342, 504, 506ರಡಿ ಪ್ರಕರಣ ದಾಖಲಾಗಿತ್ತು.

ಮಂಗಳೂರು : ಮೋದಿ ಸಮಾವೇಶಕ್ಕೆ ಗೋಲ್ಡ್ ಫಿಂಚ್ ಮೈದಾನಕ್ಕೆ ಆಗಮಿಸುತ್ತಿರುವ ಜನಸಾಗರ – Vishwanews24

 

Leave a Reply