ಬೆಂಗಳೂರು : ರಾಜ್ಯದಲ್ಲಿ ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಚಿತ್ರದುರ್ಗ ಮುರುಘರಾಜೇಂದ್ರ ಶರಣರಿಗೆ ಹೈಕೋರ್ಟ್ ನೀಡಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಅಲ್ಲಿ ಪ್ರಕರಣ ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಪುನಃ ಜೈಲಿಗೆ ಕಳುಹಿಸುವಂತೆ ಆದೇಶ ಹೊರಡಿಸಿದೆ.
ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾದ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 2022ರ ಸೆಪ್ಟೆಂಬರ್ 1ರಂದು ಮುರುಘಾ ಶ್ರೀ ಬಂಧನವಾಗಿತ್ತು. ಸುಮಾರು 14 ತಿಂಗಳ ಕಾಲ ಜೈಲಿನಲ್ಲಿದ್ದ ಮುರುಘಾ ಶ್ರೀ ಕಳೆದ ನವೆಂಬರ್ 16ರಂದು ಜೈಲಿನಿಂದ ಹೊರಗೆ ಬಂದಿದ್ದರು. ಇದಾದ ನಂತರ ಚಿತ್ರದುರ್ಗ ಮಠದ ಅಧಿಕಾರವನ್ನು ಹಿಡಿಯಲೂ ಮುಂದಾಗಿದ್ದರು. ಆದರೆ, ಪೋಕ್ಸೋ ಕೇಸ್ ಇದ್ದರೂ ಹೈಕೋರ್ಟ್‌ನಿಂದ ಜಾಮೀನಿನ ಮೇಲೆ ಹೊರಗೆ ಬಂದು ಸಾಕ್ಷಿ ನಾಶ ಮಾಡುತ್ತಿದ್ದಾರೆ ಎಂದು ಪೋಕ್ಸೋ ಕೇಸ್ ದಾಖಲಿಸಿದ ಅರ್ಜಿದಾರರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯನ್ನು ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್ ಮುರುಘಾ ಶ್ರೀಗೆ ಹೈಕೋರ್ಟ್‌ನಿಂದ ನೀಡಲಾಗಿದ್ದ ಜಾಮೀನು ರದ್ದುಗೊಳಿಸಿ ಪುನಃ ಜೈಲಿಗೆ ಕಳಿಸುವಂತೆ ಸೂಚನೆಯನ್ನು ನೀಡಿದೆ.
ಇನ್ನು ಮುರುಘ ಶ್ರೀಗೆ ನೀಡಲಾಗಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ಮುನಃ ಅವರನ್ನು 4 ತಿಂಗಳ ಕಾಲಾವಧಿಗೆ ಜೈಲಿಗೆ ಕಳುಹಿಸಬೇಕು. ಈ ಅವಧಿಯೊಳಗೆ ಸಂತ್ರಸ್ಥೆಯರು ಹಾಗೂ ಪೋಷಕರ ವಿಚಾರಣೆಗೆ ಮುಗಿಸಬೇಕು. ಒಂದು ವೇಳೆ ಪ್ರಕರಣದ ವಿಚಾರಣೆಯು ಮುಗಿಯದ್ದಿದ್ದ ಪಕ್ಷದಲ್ಲಿ ಜೈಲು ಶಿಕ್ಷೆ ಅವಧಿಯನ್ನು ವಿಸ್ತರಣೆ ಮಾಡುವ ಕುರಿತು ಸುಪ್ರೀಂ ಕೋರ್ಟ್ ಗಮನಕ್ಕೆ ತರಬೇಕು ಎಂದು ಆದೇಶಿಸಲಾಗಿದೆ. ಈ ಆದೇಶಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀ ಒಂದು ವಾರದೊಳಗೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್‌ನಿಂದ ಸೂಚನೆ ನೀಡಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…