Featured

ಮುರುಡೇಶ್ವರ : ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರ ಸಾವು ಪ್ರಕರಣ ; 7 ಮಂದಿ ಶಿಕ್ಷಕರು ಪೊಲೀಸ್‌ ವಶಕ್ಕೆ – vishwanews24

ಮುರುಡೇಶ್ವರ : ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರ ಸಾವು  ಪ್ರಕರಣ ; 7 ಮಂದಿ ಶಿಕ್ಷಕರು ಪೊಲೀಸ್‌ ವಶಕ್ಕೆ

ಕಾರವಾರ: ಮುರುಡೇಶ್ವರದಲ್ಲಿ ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೋಲಾರದಿಂದ ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದವರ ಪೈಕಿ ನಾಲ್ಕು ಜನ ವಿದ್ಯಾರ್ಥಿನಿಯರು ನೀರು ಪಾಲಾದ ಬಳಿಕ ಉತ್ತರ ಕನ್ನಡ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಒಂದೆಡೆ ಮುರುಡೇಶ್ವರ ಕಡಲ ತೀರದಲ್ಲಿ ನಿರ್ಬಂಧ ಹೇರಲಾಗಿದ್ದು, ಇನ್ನೊಂದೆಡೆ ಮುಖ್ಯ ಶಿಕ್ಷಕಿ ಸೇರಿ ಒಟ್ಟು 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಶಿಕ್ಷಕರ ವಿರುದ್ದ ಪ್ರಕರಣ ದಾಖಲಿಸಲಾಗಿದ್ದು, ನಾಲ್ಕು ವಿದ್ಯಾರ್ಥಿನಿಯರ ಸಾವಿಗೆ ಕಾರಣ, ನಿರ್ಲಕ್ಷ್ಯ ಕುರಿತು ತನಿಖೆ ಕೈಗೊಂಡಿದ್ದಾರೆ.

ಕೋಲಾರದ ಮುಳಬಾಗಿಲು ತಾಲೂಕಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಮುರುಡೇಶ್ವರ ಕಡಲ ತೀರದಲ್ಲಿ ಆಟ ಆಡುವಾಗ ಶಾಲೆಯ 7 ವಿದ್ಯಾರ್ಥಿನಿಯರು ನೀರು ಪಾಲಾಗಿದ್ದರು. 7 ವಿದ್ಯಾರ್ಥಿನಿಯರ ಪೈಕಿ 4 ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

59 seconds ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

19 minutes ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

28 minutes ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

45 minutes ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

54 minutes ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

1 hour ago