Featured

ಮುರೋಡಿ : ವಿವಾಹಿತ ಮಹಿಳೆಯ ನಿಗೂಢ ಸಾವು – vishwanews24

ಮುರೋಡಿ : ವಿವಾಹಿತ ಮಹಿಳೆಯ ನಿಗೂಢ ಸಾವು

ಮುರೋಡಿ : ವಿವಾಹಿತ ಮಹಿಳೆಯೊಬ್ಬರು ವಿಪರೀತ ಹೊಟ್ಟೆನೊವೆಂದು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಮರೋಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ,

ಮೃತರನ್ನು ಪಚ್ಚಡಿ ಮನೆಯ ಮೂಕಾಂಬಿಕಾ ನಿಲಯದ ನಿವಾಸಿ ವಾಣಿಶ್ರೀ (26) ಎಂದು ಗುರುತಿಸಲಾಗಿದೆ. ವಾಣಿಶ್ರೀ ಅವರ ವಿವಾಹ ಒಂದು ವರ್ಷಗಳ ಹಿಂದೆ ಪ್ರಶಾಂತ್ ಅವರ ಜೊತೆ ನಡೆದಿತ್ತು.

ವಾಣಿಶ್ರೀ ಅವರು ಶುಕ್ರವಾರ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಪಕ್ಕದ ಮನೆಯಲ್ಲಿದ್ದ ಅವರ ದೊಡ್ಡಮ್ಮನಿಗೆ ಅನುಮಾನ ಬಂದು ಕೂಡಲೇ ವಾಣಿಶ್ರೀ ಪತಿ ಪ್ರಶಾಂತ್‌ಗೆ ಕರೆ ಮಾಡಿದ್ದಾರೆ.

ತಕ್ಷಣವೇ ಕುಟುಂಬದ ಮಂದಿ ವಾಣಿಶ್ರೀ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಈ ಪ್ರಕರಣ ಸಂಬಂಧ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

4 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago