ಮುರ್ಡೇಶ್ವರ : ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಪೈಕಿ ನಾಲ್ವರು ವಿದ್ಯಾರ್ಥಿಗಳು ಮುರ್ಡೇಶ್ವರದಲ್ಲಿ ಸಮುದ್ರ ಪಾಲಾಗಿರುವ ಘೋರ ಘಟನೆ ನಡೆದಿದೆ.
ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು, 6 ಶಿಕ್ಷಕರು ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಮುರುಡೇಶ್ವರ ಬೀಚ್ನಲ್ಲಿ ಆಟವಾಡುತ್ತಿದ್ದಾರೆ. ಈ ವೇಳೆ ಏಕಾಏಕಿ ನಾಲ್ವರು ವಿದ್ಯಾರ್ಥಿಗಳು ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ.
ಏಳು ಜನ ವಿದ್ಯಾರ್ಥಿನಿಯರು ಸಮುದ್ರದಲ್ಲಿ ಈಜಲು ಹೋಗಿದ್ದಾರೆ. ಈ ಪೈಕಿ ಮೂರು ಜನ ವಿದ್ಯಾರ್ಥಿನಿಯರಾದ ಯಶೋಧ, ವೀಕ್ಷಣಾ, ಲಿಪಿಕಾ ಎನ್ನುವರನ್ನು ರಕ್ಷಣೆ ಮಾಡಲಾಗಿದೆ. ಇನ್ನು 9ನೇ ತರಗತಿ ಓದುತ್ತಿದ್ದ ಮುಳಬಾಗಲು ತಾಲ್ಲೂಕಿನ ಪೂಜಾರಹಳ್ಳಿ ಗೋಪಾಲಪ್ಪ ಎಂಬುವವರ ಪುತ್ರಿ ಶ್ರಾವಂತಿ ಮೃತಪಟ್ಟಿದ್ದು, ಇದೀಗ ಮೃದೇಹವನ್ನು ಹೊರತೆಗೆಯಲಾಗಿದೆ. ನೀರಿನಲ್ಲಿ ಮುಳುಗಿದ್ದ ಮೂವರು ವಿದ್ಯಾರ್ಥಿನಿಯರನ್ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇನ್ನುಳಿದಂತೆ ಮುಳಬಾಗಲು ತಾಲ್ಲೂಕಿನ ಎನ್.ಗಡ್ಡೂರು ನಿವಾಸಿ ಜೈರಾಮಪ್ಪ ಪುತ್ರಿ ದೀಕ್ಷ, ಹಬ್ಬಣಿ ಗ್ರಾಮದ ಚನ್ನರೆಡ್ಡಪ್ಪ ಪುತ್ರಿ ಲಾವಣ್ಯ, ದೊಡ್ಡಗಟ್ಟಹಳ್ಳಿಯ ಮುನಿರಾಜು ಪುತ್ರಿ ವಂದನ ಕಾಣೆಯಾಗಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆದಿದೆ. ಘಟನೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕ್ಷಕರ ನಿರ್ಲಕ್ಷ್ಯದಿಂದಲೇ ವಿದ್ಯಾರ್ಥಿನಿ ಸಾವು, ಉಳಿದ ಮೂವರು ವಿದ್ಯಾರ್ಥಿನಿಯರು ಕಾಣೆಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…