Featured

ಮುರ್ಡೇಶ್ವರ : ಪ್ರವಾಸಕ್ಕೆಂದು ಬಂದಿದ್ದ ಶಾಲಾ ವಿದ್ಯಾರ್ಥಿಗಳಲ್ಲಿ ನಾಲ್ವರು ಸಮುದ್ರ ಪಾಲು – ಓರ್ವ ವಿದ್ಯಾರ್ಥಿನಿ ಸಾವು, ಮೂವರು ನಾಪತ್ತೆ  – vishwanews24

ಮುರ್ಡೇಶ್ವರ : ಪ್ರವಾಸಕ್ಕೆಂದು ಬಂದಿದ್ದ ಶಾಲಾ ವಿದ್ಯಾರ್ಥಿಗಳು ಸಮುದ್ರ ಪಾಲು – ಓರ್ವ ವಿದ್ಯಾರ್ಥಿನಿ ಸಾವು, ಮೂವರು ನಾಪತ್ತೆ

ಮುರ್ಡೇಶ್ವರ :  ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಪೈಕಿ ನಾಲ್ವರು ವಿದ್ಯಾರ್ಥಿಗಳು ಮುರ್ಡೇಶ್ವರದಲ್ಲಿ ಸಮುದ್ರ ಪಾಲಾಗಿರುವ ಘೋರ ಘಟನೆ ನಡೆದಿದೆ.

ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು, 6 ಶಿಕ್ಷಕರು ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಮುರುಡೇಶ್ವರ ಬೀಚ್​ನಲ್ಲಿ ಆಟವಾಡುತ್ತಿದ್ದಾರೆ. ಈ ವೇಳೆ ಏಕಾಏಕಿ ನಾಲ್ವರು ವಿದ್ಯಾರ್ಥಿಗಳು ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ.

ಏಳು ಜನ ವಿದ್ಯಾರ್ಥಿನಿಯರು ಸಮುದ್ರದಲ್ಲಿ ಈಜಲು ಹೋಗಿದ್ದಾರೆ. ಈ ಪೈಕಿ ಮೂರು ಜನ ವಿದ್ಯಾರ್ಥಿನಿಯರಾದ ಯಶೋಧ, ವೀಕ್ಷಣಾ, ಲಿಪಿಕಾ ಎನ್ನುವರನ್ನು ರಕ್ಷಣೆ ಮಾಡಲಾಗಿದೆ. ಇನ್ನು 9ನೇ ತರಗತಿ ಓದುತ್ತಿದ್ದ ಮುಳಬಾಗಲು ತಾಲ್ಲೂಕಿನ ಪೂಜಾರಹಳ್ಳಿ ಗೋಪಾಲಪ್ಪ ಎಂಬುವವರ ಪುತ್ರಿ ಶ್ರಾವಂತಿ ಮೃತಪಟ್ಟಿದ್ದು, ಇದೀಗ ಮೃದೇಹವನ್ನು ಹೊರತೆಗೆಯಲಾಗಿದೆ. ನೀರಿನಲ್ಲಿ ಮುಳುಗಿದ್ದ ಮೂವರು ವಿದ್ಯಾರ್ಥಿನಿಯರನ್ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನುಳಿದಂತೆ ಮುಳಬಾಗಲು ತಾಲ್ಲೂಕಿನ ಎನ್.ಗಡ್ಡೂರು ನಿವಾಸಿ ಜೈರಾಮಪ್ಪ ಪುತ್ರಿ ದೀಕ್ಷ, ಹಬ್ಬಣಿ ಗ್ರಾಮದ ಚನ್ನರೆಡ್ಡಪ್ಪ ಪುತ್ರಿ ಲಾವಣ್ಯ, ದೊಡ್ಡಗಟ್ಟಹಳ್ಳಿಯ ಮುನಿರಾಜು ಪುತ್ರಿ ವಂದನ ಕಾಣೆಯಾಗಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆದಿದೆ. ಘಟನೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕ್ಷಕರ ನಿರ್ಲಕ್ಷ್ಯದಿಂದಲೇ ವಿದ್ಯಾರ್ಥಿನಿ ಸಾವು, ಉಳಿದ ಮೂವರು ವಿದ್ಯಾರ್ಥಿನಿಯರು ಕಾಣೆಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

 

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

2 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

3 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

3 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

6 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

7 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

7 hours ago