ಮುಲ್ಕಿ: ಅನ್ಯ ಕೋಮಿನ ಯುವಕನ ಜೊತೆ ಯುವತಿ ಪತ್ತೆಯಾಗಿದ್ದು, ಸ್ಥಳೀಯ ಯುವಕರು ಕಾರ್ಯಾಚರಣೆ ನಡೆಸಿ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಸ್ ರಾವ್ ನಗರ ಪೊಲೀಸ್ ಕ್ವಾರ್ಟರ್ಸ್ ಬಳಿ ನಡೆದಿದೆ.
ಉಡುಪಿಯ ಕಟಪಾಡಿಯಲ್ಲಿ ವಾಸ್ತವ್ಯವಿರುವ ಉತ್ತರ ಪ್ರದೇಶ ಮೂಲದ ಯುವಕ ಫಯಿಮ್ ಎಂಬಾತ ಕಟಪಾಡಿಯಲ್ಲಿ ಸೆಲೂನ್ ಅಂಗಡಿಯಲ್ಲಿ ಕೆಲಸಕ್ಕಿದ್ದು ತನ್ನ ಮಿತ್ರ ಗುಲ್ಫಾಮ್ ಎಂಬವರ ರೂಮ್‌ಗೆ ಬಂದಿದ್ದ.
ಆ ಸಂದರ್ಭ ಕೊಲಕಾಡಿ ಮೂಲದ ಯುವತಿ ಜೊತೆ ಮಾತನಾಡುತ್ತಾ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿರುವಾಗ ಸ್ಥಳೀಯರಿಗೆ ಸಂಶಯ ಬಂದು ವಿಚಾರಿಸಿದ್ದು, ಕೂಡಲೇ ಯುವತಿ ಸ್ಥಳದಿಂದ ಪರಾರಿಯಾಗಿದ್ದಾಳೆ. ಇದನ್ನೂ ಓದಿ : ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಈ ಸಂದರ್ಭ ಸ್ಥಳದಲ್ಲಿ ಮಾತಿನ ಚಕಮಕಿ ನಡೆದಿದ್ದು ಸ್ಥಳೀಯರು ಆರೋಪಿಗಳಿಗೆ ಗೂಸಾ ಇಕ್ಕಿದ್ದಾರೆ.
ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿ ಇಬ್ಬರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಇನ್ನು ಆರೋಪಿ ಫಯೀಮ್ ಕಟಪಾಡಿಯಲ್ಲಿ ನೆಲೆಸಿದ್ದು ಇಬ್ಬರು ಮಕ್ಕಳ ತಂದೆಯಾಗಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ಈತ ಕಾರ್ನಾಡುವಿನಲ್ಲಿ ಸೆಲೂನ್ ಅಂಗಡಿ ನಡೆಸುತ್ತಿದ್ದು ಬದಿಯಲ್ಲಿದ್ದ ಫ್ಯಾನ್ಸಿ ಸೆಂಟರ್ ನಲ್ಲಿ ಇದೇ ಯುವತಿ ಕೆಲಸ ಮಾಡುತ್ತಿರುವಾಗ ಸ್ನೇಹ ಪ್ರೀತಿಗೆ ತಿರುಗಿತ್ತು ಎನ್ನಲಾಗಿದೆ.
ಈ ಘಟನೆಯಿಂದ ಮುಲ್ಕಿ ಪರಿಸರ ಬೂದಿ ಮುಚ್ಚಿದ ಕೆಂಡದಂತಿದ್ದು ಠಾಣೆಯ ಹೊರಬದಿಯಲ್ಲಿ ಸಂಘಟನೆಯ ನಾಯಕರು ಸೇರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ : ಉಡುಪಿ : ಕಡಿಯಾಳಿ ತಿರುಗುವ ಮುಚ್ಚಿಗೆ ರಚಿಸಿದ್ದ ಶಿಲ್ಪಿ ಸುದರ್ಶನ ಆಚಾರ್ಯರಿಗೆ ‘ಎಸ್ಕೆ ಜಿಐ-ಫಾಲ್ಕೆ’ ಪ್ರಶಸ್ತಿ – Vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…