ಮುಲ್ಕಿ: ಕಾರು ಢಿಕ್ಕಿಯಾಗಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರೆ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ನಡೆದಿದೆ.
ಮೃತರನ್ನು ಕೇರಳ ರಾಜ್ಯದ ಕಾಸರಗೋಡಿನ ನಿವಾಸಿ ಪ್ರೀತಿಕಾ ಶೆಟ್ಟಿ (21) ಎಂದು ಗುರುತಿಸಲಾಗಿದ್ದು ಗಾಯಾಳು ಬೈಕ್ ಸವಾರನನ್ನು ಬಂಟ್ವಾಳದ ಅರಂತೋಡಿ ಬಾಳೆಪುಣಿ ನಿವಾಸಿ ಮನ್ವಿತ್ ರಾಜ್ ಶೆಟ್ಟಿ (21)ಎಂದು ಗುರುತಿಸಲಾಗಿದೆ.
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬೈಕ್ ಗೆ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಕಿನ್ನಿಗೋಳಿ ಕಡೆಯಿಂದ ಮುಲ್ಕಿ ಕಡೆಗೆ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ನ್ನು ಕಾರು ದೂಡಿಕೊಂಡು ಹೋಗಿದ್ದು ಬೈಕ್ ಹಿಂಭಾಗದಲ್ಲಿ ಕುಳಿತುಕೊಂಡಿದ್ದ ಸಹಸವಾರೆ ಪ್ರೀತಿಕಾ ಶೆಟ್ಟಿ ತಲೆಗೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ಸಾಗಿಸುವಾಗಲೇ ಮೃತಪಟ್ಟಿದ್ದಾರೆ. ಸುರತ್ಕಲ್ ಉತ್ತರ ಟ್ರಾಫಿಕ್ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…