Featured

ಮುಲ್ಕಿ : ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ – Vishwanews24

ಮುಲ್ಕಿ : ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಮುಲ್ಕಿ: ಇಲ್ಲಿನ ವಿಜಯ ಕಾಲೇಜು ಪಿಯುಸಿ ವಿದ್ಯಾರ್ಥಿ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿಯನ್ನು ಮುಲ್ಕಿ ಸಮೀಪದ

ಕಕ್ವ ಪಲ್ಕೆ ನಿವಾಸಿ ಕಿಶನ್ ಆಚಾರ್ಯ (18) ಎಂದು ಗುರುತಿಸಲಾಗಿದೆ.

ಮೃತ ವಿದ್ಯಾರ್ಥಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದು ಮಂಗಳವಾರ ಕಕ್ಕದಲ್ಲಿರುವ ಪಕ್ಕದ ದೊಡ್ಡಪ್ಪನ ಮನೆಯ ಕೋಣೆಯಲ್ಲಿ ಕಿಟಕಿ ಗೆ ಸೀರೆಯ ಶಾಲಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆಗೆ ಬಲವಾದ ಕಾರಣ ತಿಳಿದು ಬಂದಿಲ್ಲ.

ಈತ ಕಾಲೇಜಿನಲ್ಲಿ ಎಲ್ಲರ ಜೊತೆ ಒಡನಾಡಿಯಾಗಿದ್ದ ಎಂದು ತಿಳಿದು ಬಂದಿದೆ. ಈ ನಡುವೆ ಪ್ರಕರಣದ ಬಗ್ಗೆ ದೂರು ನೀಡಲು ನೂತನ ಮನೆಯವರು ಹಾಗೂ ಸಂಬಂಧಿಕರು ತೆರಳಿದಾಗ ಮುಲ್ಕಿ ಪೊಲೀಸರು ಸತಾಯಿಸಿದ್ದಾರೆ ಎಂದು ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷ ಮನೋಹರ ಕೋಟ್ಯಾನ್ ಆರೋಪಿಸಿದ್ದಾರೆ. ಬಳಿಕ ಶಾಸಕ ಸೂಚನೆ ಮೇರೆಗೆ ಪೊಲೀಸರು ದೂರನ್ನು ಸ್ವೀಕರಿಸಿದ್ದಾರೆ ಎಂದು ಅವರು ತಿಳಿಸಿದ್ದು ಪೊಲೀಸರು ಠಾಣೆಗೆ ದೂರು ನೀಡಲು ಹೋದರೆ ಬಡವರ ಅಸಹಾಯಕರ ವಿರುದ್ಧ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೃತ ಕಿಶನ್ ಆಚಾರ್ಯ ತಂದೆ ತಾಯಿ ಹಾಗೂ ಅಕ್ಕ ಅಗಲಿದ್ದಾರೆ. ಮೃತ ಕಿಶನ್ ಗೌರವಾರ್ಥ ಕಾಲೇಜಿಗೆ ರಜೆ ಘೋಷಿಸಲಾಗಿದೆ.

Vishwa News 24

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

5 hours ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

5 hours ago

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ – vishwanews24

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…

6 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – vishwanews24

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…

6 hours ago

ಮೇ 1 ರಿಂದ ಶಿವಮೊಗ್ಗ – ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ – vishwanews24

ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…

7 hours ago

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು – vishwanews24

ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…

7 hours ago